ಮಡಿಕೇರಿ:-ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ.
ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಇವರು ತಾಲೂಕಿನ ಹಳ್ಳಿಗಟ್ಟು ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದರು. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಅಂದು ಬಾರದವರಿಗೆ ಇಂದು ಕೂಡ ಸಿಹಿ ಹಂಚಿದ್ದಳು. ಇಂದು ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಸಂಜೆ 4:30ರ ಸುಮಾರಿಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಒಳಗಿನಿಂದ ಬಾಗಿಲು ಹಾಕಿಕೊಂಡಿತ್ತು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿದ್ದಾಳೆ. ನಂತರ ಬಾಗಿಲು ತೆಗೆದು ನೋಡಿದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಡೆತ್ ನೋಟ್ ನಲ್ಲಿ ಏನಿದೆ?
ಆರು ವಿಷಯ ಬ್ಯಾಕ್‌ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿದ್ಯಾರ್ಥಿನಿ ಡೆತ್ ನೋಟ್ ಬರೆದಿದ್ದಾಳೆ.