ಗೌತಮ್ ಅದಾನಿ, ಸಾಗರ್ ಅದಾನಿಗೆ ಸಮನ್ಸ್ ಜಾರಿ: 21 ದಿನದಲ್ಲಿ ಉತ್ತರಿಸಲು ಸೂಚನೆ

0
Spread the love

ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಗೌತಮ್‌ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಅಧಿಕಾರಿಗಳು ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್‌ಗೂ ಹೆಚ್ಚು ಲಂಚದ ಭರವಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ವಿವರಣೆ ಕೋರಿ ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

Advertisement

ಅಹ್ಮದಾಬಾದ್ ನಲ್ಲಿರುವ ಅದಾನಿ ಅವರ ಶಾಂತಿವನ ನಿವಾಸಕ್ಕೆ ಮತ್ತು ಅದೇ ನಗರದಲ್ಲಿನ ಅವರ ಸೋದರಳಿಯ ಸಾಗರ್ ಅವರ ನಿವಾಸಕ್ಕೆ ಸಮನ್ಸ್ ಕಳುಹಿಸಲಾಗಿದೆ. ಈ ಸಮನ್ಸ್ ನೀಡಿದ 21 ದಿನಗಳಲ್ಲಿ ನೀವು ಕಡ್ಡಾಯವಾಗಿ ಉತ್ತರವನ್ನು ಸಲ್ಲಿಸಬೇಕು ಎಂದು ನ್ಯೂಯಾರ್ಕ್ ಪೂರ್ವ ಜಿಲ್ಲಾ ನ್ಯಾಯಾಲಯ ನೋಟಿಸ್ ನಲ್ಲಿ ಉಲ್ಲೇಖಿಸಿದೆ.

ಗೌತಮ್ ಅದಾನಿ ಮತ್ತು ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ನಿರ್ದೇಶಕರಾಗಿರುವ ಅವರ ಸೋದರಳಿಯ ಸಾಗರ್ ಸೇರಿದಂತೆ ಇತರ 7 ಆರೋಪಿಗಳು 2020 ಮತ್ತು 2024ರ ನಡುವೆ ಸೌರ ಗುತ್ತಿಗೆ ಪಡೆಯಲು ಭಾರತೀಯ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ಬೆನ್ನಲ್ಲೇ ಅದಾನಿ ವಿರುದ್ಧ ನ್ಯೂಯಾರ್ಕ್ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.


Spread the love

LEAVE A REPLY

Please enter your comment!
Please enter your name here