ಪರ ಹೆಂಗಸಿನ ಜೊತೆ ಸಲುಗೆಯಿಂದ ಇದ್ದ ಗಂಡನ ಕಾಲು ಮುರಿಯಲು ಸುಪಾರಿ ಕೊಟ್ಟ ಹೆಂಡ್ತಿ!

0
Spread the love

ಕಲಬುರ್ಗಿ:- ನಗರದ ಅತ್ತರ ಕಂಪೌಡ್ ಬಳಿ ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಜರುಗಿದೆ.

Advertisement

ಘಟನೆ ಹಿನ್ನೆಲೆ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ರನ್ನ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದಾರೆ. ವೆಂಕಟೇಶ್ ಕೆಲ ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ, ಹೀಗಾಗಿ ದಂಪತಿಗಳ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಅಂತ ಪತ್ನಿ ಸ್ಕೆಚ್‌ ಹಾಕಿದ್ದಾಳೆ.

ಪತಿಯ ಎರಡೂ ಕಾಲುಗಳನ್ನ ಮುರಿಯಲು 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಆದ್ರೆ ವೆಂಕಟೇಶ್‌ ಮಗ ಇದು ದರೋಡೆ ಪ್ರಕರಣದ ವೇಳೆ ಕಾಲು ಮುರಿತ ಎಂದು ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here