• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಸಮಾಜದಲ್ಲಿ ಮೂಢನಂಬಿಕೆಯನ್ನು ಕಿತ್ತೊಗೆಯಬೇಕು

News Desk by News Desk
March 15, 2024
in Gadag News
nalatavada
0
SHARES
3
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ನಾಲತವಾಡದ ವೀರೇಶ್ವರ ಶರಣರು ಶಿಕ್ಷಕರಾಗಿ, ಕೃಷಿಕರಾಗಿ ಜಂಗಮ ದಾಸೋಹದಲ್ಲಿ ನಿರತರಾಗಿದ್ದರು. ಗ್ರಾಮ ದೇವತೆಯ ಜಾತ್ರೆಯಲ್ಲಿ ಪ್ರಾಣಿಬಲಿ ಕೊಡುವುದನ್ನು ವಿರೋಧಿಸಿದರು.

ಅವರು ಹುಟ್ಟಿ ಬೆಳೆದದ್ದು ನಾಲತವಾಡವಾದರೂ ಸಾಧನೆ ಮಾಡಿದ ಕ್ಷೇತ್ರ ಸೋಲಾಪುರದಲ್ಲಿ ಎಂದು ಅಳವಂಡಿಯ ಸಿದ್ದೇಶ್ವರ ಸಂಸ್ಥಾನ ಕಟ್ಟಿಮನಿ ಹಿರೇಮಠದ ಮರುಳಾರಾದ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ನರಸಾಪೂರ ಗ್ರಾಮದ ನಾಲತವಾಡ ವೀರೇಶ್ವರ ಶರಣರ ಮಠದಲ್ಲಿ ವೀರೇಶ್ವರ ಶರಣರ ಜಯಂತ್ಯುತ್ಸವ, ಮಹಾರಥೋತ್ಸವ ಹಾಗೂ ಚಂದ್ರಶೇಖರ ಶರಣರ 11ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ನಡೆದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಮೂಢನಂಬಿಕೆಯನ್ನು ಬುಡ ಸಮೇತ ಕಿತ್ತೊಗೆಯಬೇಕು. ಸರ್ವ ಸಮಾಜದಲ್ಲಿ ಸಮನ್ವಯತೆ, ಸಹಕಾರ ಮೂಡಿಸಿ, ಜಾತಿ, ಬೇಧ-ಭಾವಗಳನ್ನು ತೊಲಗಿಸುವಲ್ಲಿ ತಮ್ಮ ದಿನ ನಿತ್ಯದ ಕಾಯಕದೊಂದಿಗೆ ಅವಿರತವಾಗಿ ಶ್ರಮಿಸಿದರು. ವೀರೇಶ್ವರ ಶರಣರು ದೇಹ ತೊರೆಯುವವರೆಗೂ ಸಂಕಷ್ಟದ ಬದುಕನ್ನೇ ನಡೆಸಿದರು ಎಂದು ಹೇಳಿದರು.

ಇದಕ್ಕೂ ಮುನ್ನ ಬೆಳಿಗ್ಗೆ ಷಟಸ್ಥಲ ಧ್ವಜಾರೋಹಣ, ವೀರೇಶ್ವರ ಶರಣರ ಹಾಗೂ ಚಂದ್ರಶೇಖರ ಶರಣರ ಮೂರ್ತಿಗಳಿಗೆ ಮಹಾರುದ್ರಾಭಿಷೇಕ ನಂತರ ಚಂದ್ರಶೇಖರ ಶರಣರ ಪುಣ್ಯಸ್ಮರಣೋತ್ಸವ, ಮಹೇಶ ಕುಂದ್ರಾಳಹಿರೇಮಠರಿಂದ ಸಂಗೀತ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಕಳಕಮಲ್ಲಯ್ಯ ಹಿರೇಮಠ, ಕೆ.ಎಸ್. ಹಿರೇಮಠ, ಡಾ. ನಾಗರತ್ನಮ್ಮ, ಉಮೇಶ ಶಿವಶಿಂಪರ ಸೇರಿ ಅನೇಕರು ಇದ್ದರು. ಎಸ್.ಐ. ಪಾಟೀಲ ಸ್ವಾಗತಿಸಿದರು. ಡಾ. ಸುಜಾತಾ ಪಾಟಿಲ ಪ್ರಾಸ್ತಾವಿಕ ಮಾತನಾಡಿದರು. ಬಿ.ಎಲ್. ಹೊಸಳ್ಳಿಹಿರೇಮಠ ನಿರೂಪಿಸಿದರು. ಲಿಂಗರಾಜ್ ಕಬ್ಬೂರ ವಂದಿಸಿದರು.

ಶ್ರೀಮಠದ ಪೀಠಾಧಿಪತಿ ಶಿವಕುಮಾರ ಶರಣರು ಮಾತನಾಡಿ, ವೀರೇಶ್ವರ ಶರಣರು ತಮ್ಮ ಕಾಯಕದ ಮೂಲಕ ಬಂದ ಹಣವನ್ನು ದಾಸೋಹ ನಡೆಸುತ್ತಿದ್ದರು. ನಂತರ ವೀರೇಶ್ವರ ಶರಣರ ಪ್ರೇರಣೆಯಿಂದ ಚಂದ್ರಶೇಖರ ಶರಣರು ನರಸಾಪೂರ ಗ್ರಾಮದಲ್ಲಿ ೧೯೭೪ರಲ್ಲಿ ವೀರೇಶ್ವರ ಶರಣರ ಮಠವನ್ನು ಸ್ಥಾಪಿಸಿ ನಿತ್ಯ ಪೂಜಾ ಕೈಂಕರ್ಯಗಳನ್ನು ನಡೆಸುತ್ತ, ಭಕ್ತರ ಸಮಸ್ಯೆಗಳನ್ನು ಪರಿಹರಿಸುತ್ತ ಶ್ರೀಮಠವನ್ನು ಮುನ್ನಡೆಸಿಕೊಂಡು ಬಂದರು ಎಂದರು.

Tags: 11th commemoration of Chandrasekhara SharanConstituency SolapurmaharathotsavaMarularadya Shivacharya SwamijiNālatavāḍada vīrēśvara śaraṇaruSiddeshwar Sansthan Kattimani HiremathVeereshwar Sharan's Jayantyutsava
ShareSendShare
Previous Post

‘ಕಲಾ ವಿಕಾಸ ಪುರಸ್ಕಾರ’ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Next Post

ಶ್ರೀ ಜಗದಂಬಾ ಶಾಲೆಯ ವಿದ್ಯಾರ್ಥಿಗಳ ಸಾಧನೆ

News Desk

News Desk

Next Post
jagadamba

ಶ್ರೀ ಜಗದಂಬಾ ಶಾಲೆಯ ವಿದ್ಯಾರ್ಥಿಗಳ ಸಾಧನೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ? ಎರಡು ಸುತ್ತು ಫೈರಿಂಗ್‌ಗೆ ಯುವಕ ಬಲಿ!

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ? ಎರಡು ಸುತ್ತು ಫೈರಿಂಗ್‌ಗೆ ಯುವಕ ಬಲಿ!

November 5, 2026
ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

November 5, 2026
ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026
ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ? ಎರಡು ಸುತ್ತು ಫೈರಿಂಗ್‌ಗೆ ಯುವಕ ಬಲಿ!

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ? ಎರಡು ಸುತ್ತು ಫೈರಿಂಗ್‌ಗೆ ಯುವಕ ಬಲಿ!

November 5, 2026
ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper