ಬೆಂಗಳೂರು: ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ವಿವಾದ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ, ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.
ಈ ಹಿಂದೆ ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ದೇಗುಲದಲ್ಲಿ ಭಕ್ತರು ಲಡ್ಡು ವಿವಾದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ದೇವರ ಪ್ರಸಾದವನ್ನೇ ಕಲಬೆರಕೆ ಮಾಡಿರುವ ಕರ್ಮ ಬಿಡೋದಿಲ್ಲ ಎಂದು ಭಕ್ತರು ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.
ಇನ್ನೂ ಈಗಾಗಲೇ ದೇವಸ್ಥಾನದಿಂದ ಪ್ರತಿದಿನ ಲಡ್ಡು ವಿತರಣೆ ಮಾಡಲಾಗುತ್ತಿತ್ತು. ಇದೀಗ, ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ, ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಕ್ಟೋಬರ್ 12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಟಿಟಿಡಿ ಆಡಳಿತ ಮಂಡಳಿ ಲಡ್ಡು ಸರಬರಾಜು ಮಾಡುವುದಿಲ್ಲ.