ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ವಿ.ಪಿ. ಗಾಲಾ ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ವರ್ಲ್ಡ್ ಕ್ಯಾನ್ಸರ್ ಡೇ ಕಾರ್ಯಕ್ರಮ ಆಚರಿಸಲಾಯಿತು.
ಪ್ರಾಚಾರ್ಯ ಅಮರಯ್ಯ ಚಿನ್ನಯ್ಯನಮಠ ಮಾತನಾಡಿ, ಫೆಬ್ರವರಿ 4, ವಿಶ್ವ ಕ್ಯಾನ್ಸರ್ ದಿನ. ಈ ದಿನವನ್ನು ನಾವು ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು, ಅದರ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಬಗ್ಗೆ ಜನರಲ್ಲಿ ಅರಿವು ಹೆಚ್ಚಿಸಲು ಆಚರಿಸುತ್ತೇವೆ. ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆಯಾಗಿದ್ದು, ಇದು ಜಗತ್ತಿನಾದ್ಯಂತ ಲಕ್ಷಾಂತರ ಜನರ ಸಾವಿಗೆ ಕಾರಣವಾಗಿದೆ. ಆದರೆ, ನಾವು ಈ ಸತ್ಯವನ್ನು ಒಪ್ಪಿಕೊಳ್ಳುವ ಜೊತೆಗೆ, ಕ್ಯಾನ್ಸರ್‌ನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿದರೆ ಮತ್ತು ಸೂಕ್ತ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು ಎಂಬುದನ್ನು ನೆನಪಿಟ್ಟುಕೊಳ್ಳಬೇಕು ಎಂದರು.
ವಿಶ್ವ ಕ್ಯಾನ್ಸರ್ ದಿನದಂದು ನಾವೆಲ್ಲರೂ ಒಗ್ಗೂಡಿ ಕ್ಯಾನ್ಸರ್ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡೋಣ. ಜಾಗೃತಿ ಮೂಡಿಸುವ ಮೂಲಕ ಮತ್ತು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಕ್ಯಾನ್ಸರ್ ಮುಕ್ತ ಸಮಾಜವನ್ನು ನಿರ್ಮಿಸೋಣ. ಕ್ಯಾನ್ಸರ್ ರೋಗಿಗಳಿಗೆ ಬೆಂಬಲ ನೀಡಿ, ಅವರಿಗೆ ಧೈರ್ಯ ತುಂಬೋಣ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಅಧ್ಯಕ್ಷೆ ರಚನಾ ಗಾಲಾ, ಸೆಕ್ರೆಟರಿ ಪಂಕಜ್ ಗಾಲಾ, ನಿರ್ದೇಶಕ ಗುಂಜನ ಗಾಲಾ ಮುಂತಾದವರಿದ್ದರು.