ಪಕ್ಷದ ನಾಡಪ್ರೇಮಿ ಸೈನಿಕರನ್ನು ಬೆಂಬಲಿಸಿ

0
krs
Spread the love

ವಿಜಯಸಾಕ್ಷಿ ಸುದ್ದಿ, ಗದಗ : ತಮ್ಮ ಭ್ರಷ್ಟಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ, ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ ಸಮಿತಿ ಪಕ್ಷವನ್ನ ಬೆಂಬಲಿಸುವಂತೆ ರಾಜ್ಯದ ಜನರನ್ನ ಕೋರಲು ಹಾಗೂ ಸ್ವಚ್ಛ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸಲು ಫೆ.19ರಿಂದ ಕೆಆರ್‌ಎಸ್ ಪಕ್ಷವು `ಕರ್ನಾಟಕಕ್ಕಾಗಿ ನಾವು’ ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ ಬೈಕ್ ಜಾಥಾ ಹಮ್ಮಿಕೊಂಡಿದ್ದು, ಫೆ.28ರಂದು ಗದಗ ನಗರಕ್ಕೆ ಆಗಮಿಸಲಿದೆ ಎಂದು ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರನಗೌಡ ಮೂಗನೂರ ತಿಳಿಸಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಿಂದ ಆರಂಭವಾಗಿರುವ ಈ ಜಾಥಾದ ನೇತೃತ್ವವನ್ನು ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿಯವರು ವಹಿಸಿದ್ದು, ಫೆ.19ರಿಂದ ಮಾರ್ಚ್.೨ರವರೆಗೆ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಜಾಥಾ ಸಂಚರಿಸಲಿದೆ. 29 ಜಿಲ್ಲಾ ಕೇಂದ್ರಗಳು ಮತ್ತು ಐವತ್ತಕ್ಕಿಂತ ಹೆಚ್ಚು ತಾಲ್ಲೂಕು ಕೆಂದ್ರಗಳು ಸೇರಿದಂತೆ ಸುಮಾರು 82 ಪಟ್ಟಣ/ನಗರಗಳಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಫೆಬ್ರುವರಿ 2ರಂದು ನೆಲಮಂಗಲದಲ್ಲಿ ಬೃಹತ್ ಸಮಾರೋಪ ಸಮಾವೇಶ ನಡೆಯಲಿದೆ ಎಂದರು.

ಹತ್ತಾರು ಯಶಸ್ವಿ ಜಾಥಾ ಮತ್ತು ಅಭಿಯಾನಗಳ ಕಾರಣಕ್ಕಾಗಿಯೇ ಕಳೆದ ವರ್ಷ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಚುನಾವಣಾ ಅಕ್ರಮಗಳನ್ನು ಎಸಗದೆ, ಹಣ-ಹೆಂಡ ಹಂಚದೆ, ಜಾತಿ-ಕೋಮುಗಳ ಅನೈತಿಕ ರಾಜಕಾರಣ ಮಾಡದೆ ಕೆಆರ್‌ಎಸ್ ಪಕ್ಷವು 195 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಾಧ್ಯವಾಗಿದ್ದು, ಯಾವುದೇ ಸರ್ಕಾರಿ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕರ್ತವ್ಯಲೋಪದ ವಿಚಾರ ಬಂದಾಗ ರಾಜ್ಯದ ಜನರಿಗೆ ಇಂದು ನೆನಪಾಗುವುದೇ ಕೆಆರ್‌ಎಸ್ ಪಕ್ಷ ಹಾಗೂ ಪಕ್ಷದ ಪ್ರಾಮಾಣಿಕ ಮತ್ತು ಧೈರ್ಯಶಾಲಿ ಸೈನಿಕರು ಎಂದರು.

ಮುಂದಿನ ಒಂದೆರಡು ತಿಂಗಳಿನಲ್ಲಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡುವುದಾಗಿ ವೀರನಗೌಡ ಮೂಗನೂರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಫಕೀರಗೌಡ ತಮ್ಮನಗೌಡ, ಮೌಲಾಸಾಬ ಪೆಂಡಾರಿ, ರಫೀಕಸಾಬ ಅಣ್ಣಿಗೇರಿ, ಸುಲೇಮಾನ ಬೆಟಗೇರಿ, ಬಸವರಾಜ ಅರಗಂಜಿ, ಖಾದಿರಸಾಬ ತೆಕ್ಕಲಕೋಟೆ, ಕೋಟೇಶ ಮುಳಗುಂದ, ಕೃಷ್ಣಾ ವಡವಿ ಸೇರಿದಂತೆ ಇತರರಿದ್ದರು.

ಈ ಜಾಥಾ ಸಂದರ್ಭದಲ್ಲಿ `ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನಪಕ್ಷಪಾತಿಗಳನ್ನು, ಅನೈತಿಕ ನಡವಳಿಕೆ ಉಳ್ಳವರನ್ನು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣು ಪಾಲು ಮಾಡುತ್ತಿರುವ ಜೆ.ಸಿ.ಬಿ ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ತಮ್ಮ ಮತ್ತು ತಮ್ಮ ಮಕ್ಕಳ ರಾಜಕೀಯ ನಾಯಕರೆಂದು ಒಪ್ಪಿಕೊಳ್ಳದೆ ಜನಪರ ಕಾಳಜಿಯ ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟç ಸಮಿತಿ ಪಕ್ಷದ ನಾಡಪ್ರೇಮಿ ಸೈನಿಕರನ್ನು ಮತ್ತು ಕೆಆರ್‌ಎಸ್ ಪಕ್ಷವನ್ನು ಬೆಂಬಲಿಸಿ’ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ ಎಂದು ವೀರನಗೌಡ ಮೂಗನೂರ ತಿಳಿಸಿದರು.


Spread the love

LEAVE A REPLY

Please enter your comment!
Please enter your name here