ಇಂಡಿಯಾ ಗಾಟ್ ಲಾಟೆಂಟ್ ಶೋನಲ್ಲಿ ತಂದೆ-ತಾಯಿ ಸೆಕ್ಸ್ ಬಗ್ಗೆ ಅಪಹಾಸ್ಯ ಮಾಡಿದ್ದ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಟೀಂಗೆ ಸುಪ್ರೀಂಕೋರ್ಟ್ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದೆ. ಸಭ್ಯತೆ ಮೀರಬಾರದು ಎಂದು ಸೂಚಿನೆ ನೀಡಿ ಯೂಟ್ಯೂಬ್ ವಿಡಿಯೋ ಮಾಡಲು ಅನುಮತಿ ನೀಡಿದೆ. ಈ ಮೂಲಕ ರಣವೀರ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ರಣವೀರ್ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾದ ಬಳಿಕ ಯುಟ್ಯೂಬ್ ಗೆ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಯೂಟ್ಯೂಬ್ ಶೋ ನಡೆಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಆದರೆ ಯೂಟ್ಯೂಬ್ ಶೋಗಳಲ್ಲಿ ಸಭ್ಯತೆ ಇರಬೇಕು. ಯಾವುದೇ ಕಾರಣಕ್ಕೂ ಎಲ್ಲೆ ಮೀರಾ ಬಾರದು. ಇದೇ ವೇಳೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಹೇಳಿದೆ.
ಇಂಡಿಯಾ ಗಾಟ್ ಲಾಟೆಂಟ್ ಶೋ ವೈರಲ್ ಆದ ಬಳಿಕ ಇಡೀ ದೇಶಾದ್ಯಂತ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಮನಸ್ಸಿನಲ್ಲಿರುವ ಕೆಟ್ಟದ್ದನ್ನು ಯೂಟ್ಯೂಬ್‌ನಲ್ಲಿ ರಣವೀರ್ ಹೊರ ಹಾಕಿದ್ದಾರೆ. ಸಮಾಜಕ್ಕೆ ತನ್ನದೇ ಆದ ಮೌಲ್ಯಗಳಿವೆ. ಆ ಮೌಲ್ಯಗಳನ್ನು ನೀವು ಗೌರವಿಸಬೇಕು. ಸಮಾಜವನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸಮಾಜದ ನಿಯಮಗಳ ವಿರುದ್ಧ ಮಾತನಾಡುವ ಹಕ್ಕು ಯಾರಿಗೂ ಕೊಟ್ಟಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.