HomeEntertainment‘ಥಗ್ ಲೈಫ್’ ಸೋಲಿನ ಬೆನ್ನಲ್ಲೇ ಕಮಲ್‌ ಹಾಸನ್‌ ಗೆ ಮತ್ತೊಂದು ಬಿಗ್‌ ಶಾಕ್‌ ನೀಡಿದ ಸುಪ್ರೀಂ...

‘ಥಗ್ ಲೈಫ್’ ಸೋಲಿನ ಬೆನ್ನಲ್ಲೇ ಕಮಲ್‌ ಹಾಸನ್‌ ಗೆ ಮತ್ತೊಂದು ಬಿಗ್‌ ಶಾಕ್‌ ನೀಡಿದ ಸುಪ್ರೀಂ ಕೋರ್ಟ್

For Dai;y Updates Join Our whatsapp Group

Spread the love

ಕಮಲ್‌ ಹಾಸನ್‌ ನಟನೆಯ ಥಗ್‌ ಲೈಫ್‌ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಮಕಾಟೆ ಮಲಗಿದೆ. ಸಿನಿಮಾದ ಸೋಲಿನಿಂದ ಕಂಗೆಟ್ಟಿರುವ ಕಮಲ್‌ ಗೆ ಇದೀಗ ಸುಪ್ರೀಂ ಕೋರ್ಟ್‌ ಕೂಡ ಬಿಗ್‌ ಶಾಕ್‌ ನೀಡಿದೆ. ಕರ್ನಾಟಕದಲ್ಲಿ ‘ಥಗ್ ಲೈಫ್’ ಪ್ರದರ್ಶನಗೊಳ್ಳುವ ಚಿತ್ರಮಂದಿರಗಳ ರಕ್ಷಣೆಗಾಗಿ ಕಮಲ್‌ ಹಾಸನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ತುರ್ತಾಗೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠವು ಕರ್ನಾಟಕದ ರಂಗಭೂಮಿ ಸಂಘವು ಹೈಕೋರ್ಟ್‌ ಮೊರೆ ಹೋಗುವಂತೆ ಸೂಚನೆ ನೀಡಿದೆ.

ಅರ್ಜಿದಾರರ ಪರ ಹಾಜರಾದ ವಕೀಲರು, ಕರ್ನಾಟಕದಲ್ಲಿ ಚಲನಚಿತ್ರ ಪ್ರದರ್ಶನವನ್ನು ವಿರೋಧಿಸಿ ಗಡಿನಾಡು ಗುಂಪುಗಳು ಬಹಿರಂಗ ಬೆದರಿಕೆ ಹಾಕಿವೆ. ಚಿತ್ರಮಂದಿರಗಳಿಗೆ ಬೆಂಕಿ ಇಡುವುದಾಗಿ ಬೆದರಿಕೆ ಒಡ್ಡಿವೆ ಎಂದು ವಾದಿಸಿದರು. ಆದರೆ, ಸುಪ್ರೀಂ ಕೋರ್ಟ್‌ ಪ್ರಕರಣವನ್ನು ತುರ್ತು ವಿಚಾರಣೆಗೆ ನಿರಾಕರಿಸಿದೆ. ಈ ಮೂಲಕ ಸದ್ಯದ ಮಟ್ಟಿಗೆ ಕರ್ನಾಟಕದಲ್ಲಿ ಥಗ್‌ ಲೈಫ್‌ ಸಿನಿಮಾ ರಿಲೀಸ್‌ ಆಗೋದು ಅನುಮಾನವೇ ಆಗಿದೆ.

ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಹೇಳಿಕೆ ನೀಡುವ ಮೂಲಕ ಕಮಲ್‌ ಹಾಸನ್‌ ವಿವಾದಕ್ಕೆ ಕಾರಣವಾಗಿದ್ದಾರೆ. ಆ ಬಳಿಕ ಹಲವು ಸಂಘಟನೆಗಳು ಕಮಲ್‌ ಕ್ಷಮೆ ಕೇಳುವಂತೆ ಒತ್ತಾಯಿಸಿವೆ. ಆದರೆ ಕಮಲ್‌ ಮಾತ್ರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು ಕ್ಷಮೆ ಕೇಳಲು ಹಿಂದೇಟು ಹಾಕಿದ್ದಾರೆ. ಈ ಮಧ್ಯೆ ಥಗ್ ಲೈಫ್‌ ಸಿನಿಮಾ ಹೇಳ ಹೆಸರಿಲ್ಲದ ರೀತಿಯಲ್ಲಿ ಬಾಕ್ಸ್‌ ಆಫೀಸ್‌ ನಲ್ಲಿ ಹೀನಾಯವಾಗಿ ಸೋಲು ಅನುಭವಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!