ನವದೆಹಲಿ: ಮಧ್ಯಪ್ರದೇಶ ವಿಜಯ್ ಶಾ ಹೆಸರಿನ ಮಂತ್ರಿಯೊಬ್ಬರು ಪಾಕಿಸ್ತಾದೊಂದಿಗೆ ಯುದ್ಧ ನಡೆಯುತ್ತಿದ್ದಾಗ ಅದಕ್ಕೆ ಸಂಬಂಧಿಸಿದ ವಿದ್ಯಮಾನಗಳನ್ನು ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ನೀಡುತ್ತಿದ್ದ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ವಿಷಯದಲ್ಲಿ ಕೆಲವು ಅನಪೇಕ್ಷಿತ ಪದಗಳನ್ನು ಬಳಸಿದ್ದರು.
ಇನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ವಿರುದ್ಧ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮಧ್ಯಪ್ರದೇಶದ ಹೈಕೋರ್ಟ್ ಆದೇಶದ ಮೇರೆಗೆ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಮಧ್ಯಪ್ರದೇಶ ಸಚಿವ ವಿಜಯ್ ಶಾ ವಿರುದ್ಧ ಬುಧವಾರ ಇಂದೋರ್ ಜಿಲ್ಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.
ಇನ್ನು ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದಿದೆ. ವಿಜಯ್ ಶಾ ನೀಡಿದ ಹೇಳಿಕೆಗಳನ್ನು ಟೀಕಿಸಿದ ಕೋರ್ಟ್, ದೇಶವು ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಸಚಿವರು ಜವಾಬ್ದಾರಿಯುತರಾಗಿರಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆ ಎಂದು ಒತ್ತಿ ಹೇಳಿದೆ.
ಅದಲ್ಲದೆ ‘ನೀವು ಯಾವ ರೀತಿಯ ಕಾಮೆಂಟ್ಗಳನ್ನು ಮಾಡುತ್ತಿದ್ದೀರಿ..? ನೀವು ಸ್ವಲ್ಪ ಸೂಕ್ಷ್ಮತೆಯನ್ನು ತೋರಿಸಬೇಕು. “ಹೋಗಿ ಹೈಕೋರ್ಟ್ನಲ್ಲಿ ಕ್ಷಮೆಯಾಚಿಸಿ” ಎಂದು ಅವರು ಛೀಮಾರಿ ಹಾಕಿದರು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು.
ಮತ್ತೊಂದೆಡೆ, ಕರ್ನಲ್ ವಿರುದ್ಧ ಮಾಡಿದ ಟೀಕೆಗಳಿಗಾಗಿ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಪೊಲೀಸ್ ಇಲಾಖೆಗೆ ಆದೇಶಿಸಿದೆ ಎಂದು ತಿಳಿದಿದೆ. ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದೂಡಿತು