ಗದಗ; ಗದಗ–ಬೆಟಗೇರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಕಂಡು ಬಂದಿದ್ದು, ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಮಾರ್ಚ್ 03 ರಂದು ನಡೆಯಬೇಕಿದ್ದ ಅಧ್ಯಕ್ಷ–ಉಪಾಧ್ಯಕ್ಷರ ಚುನಾವಣೆ, ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿರುವ Special Leave to Appeal (C) No(s): 8340/2026 ಪ್ರಕರಣದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದಿನಾಂಕ 27-02-2026 ರಂದು ಈ ತಾತ್ಕಾಲಿಕ ಸ್ಥಗಿತ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ, 03 ಮಾರ್ಚ್ 2026 ರಂದು ನಿಗದಿಯಾಗಿದ್ದ ಚುನಾವಣೆ ಮುಂದಿನ ಆದೇಶದವರೆಗೆ ನಡೆಯುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಅಂತಿಮ ಆದೇಶ ಹೊರ ಬರುವವರೆಗೆ ಚುನಾವಣಾ ಪ್ರಕ್ರಿಯೆ ಸ್ಥಗಿತವಾಗಿರಲಿದೆ ಎಂದು ಉಪವಿಭಾಗಾಧಿಕಾರಿಗಳ ಕಚೇರಿ ಪ್ರಕಟಿಸಿದೆ.



