ಡಿಕೆಶಿ, ಸಿಬಿಐಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ: ಕಾರಣ ಇಲ್ಲಿದೆ!?

0
Spread the love

ಬೆಂಗಳೂರು:– ಅಕ್ರಮ ಆಸ್ತಿ ಗಳಿಕೆ ಕೇಸ್‌ ಗೆ ಸಂಬಧಪಟ್ಟಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಿಬಿಐಗೆ ಸುಪ್ರೀಂ ನೋಟಿಸ್ ಜಾರಿ ಮಾಡಿದೆ.

Advertisement

ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆಗೆ ನೀಡಿದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಡಿಕೆಶಿ ಮತ್ತು ಸಿಬಿಐಗೆ ನೋಟಿಸ್ ನೀಡಿದೆ.

ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರ ನೀಡಿರುವ ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಮತ್ತು ಸರ್ಕಾರ ಮಾಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರು ಮನವಿ ಮಾಡಿದರು. ಲೋಕಾಯುಕ್ತ ತನಿಖೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. ಒಂದು ವೇಳೆ ತನಿಖೆ ನ್ಯಾಯಬದ್ಧವಾಗಿಲ್ಲ ಎಂದಾದರೆ ಮತ್ತೆ ಸುಪ್ರೀಂಕೋರ್ಟ್ ಸಂಪರ್ಕ ಮಾಡಬಹುದು ಎಂದು ಸೂಚಿಸಿತು.

ಪ್ರತಿವಾದಿಗಳಾದ ಡಿ.ಕೆ ಶಿವಕುಮಾರ್ ಮತ್ತು ಸಿಬಿಐಗೆ ನೋಟಿಸ್ ನೀಡಲಾಗವುದು. ಸಿಬಿಐ ಈವರೆಗೂ ಯಾವುದೇ ಅರ್ಜಿ ಸಲ್ಲಿಸಿಲ್ಲ, ಅದರ ಮುಂದಿನ ನಡೆ ಏನು ಎಂಬುದನ್ನು ತಿಳಿಸಬೇಕು. ಡಿ.ಕೆ ಶಿವಕುಮಾರ್ ಮೂರು ವಾರಗಳಲ್ಲಿ ಅಕ್ಷಪಣೆ ಸಲ್ಲಿಸಲಿ. ಬಳಿಕ ಇನ್ನೊಂದು ವಾರದಲ್ಲಿ ಯತ್ನಾಳ್ ಆಕ್ಷೇಪಣೆಗೆ ಪ್ರತಿಕ್ರಿಯೆ ನೀಡಬೇಕು ಎಂದ ಕೋರ್ಟ್‌ ನಾಲ್ಕು ವಾರಗಳ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿತು.


Spread the love

LEAVE A REPLY

Please enter your comment!
Please enter your name here