HomeGadag Newsಡಿಎಸ್‌ಎಸ್‌ ಸಂಚಾಲಕರಾಗಿ ಸುರೇಶ ನಂದೆಣ್ಣವರ ನೇಮಕ

ಡಿಎಸ್‌ಎಸ್‌ ಸಂಚಾಲಕರಾಗಿ ಸುರೇಶ ನಂದೆಣ್ಣವರ ನೇಮಕ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ)ಯ ಲಕ್ಷ್ಮೇಶ್ವರ ತಾಲೂಕು ಸಂಚಾಲಕರಾಗಿ ಸುರೇಶ ನಂದೆಣ್ಣವರ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ)ಯ ಲಕ್ಷ್ಮೇಶ್ವರ ತಾಲೂಕು ಸಂಚಾಲಕರಾಗಿ ಸುರೇಶ ನಂದೆಣ್ಣವರ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಬಳ್ಳಾರಿ ಹಾಗೂ ಗದಗ ಜಿಲ್ಲಾ ಸಂಚಾಲಕ ದುರ್ಗಪ್ಪ ಎಲ್.ಎಚ್. ಅವರು ಭಾನುವಾರ ನೇಮಕಾತಿ ಆದೇಶ ನೀಡಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪ ಅವರ ತತ್ತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಶೋಷಿತ ಸಮುದಾಯಗಳ ಏಳಿಗೆ, ಸಾಮಾಜಿಕ ನ್ಯಾಯ ಮತ್ತು ಸಂಘಟನೆಯ ಬಲವರ್ಧನೆಗೆ ಶ್ರಮಿಸುವಂತೆ ಸೂಚಿಸಿದರು.

ಸಂಘಟನೆಯ ತಾಲೂಕು ಪದಾಧಿಕಾರಿಗಳನ್ನೂ ನೇಮಕ ಮಾಡಲಾಯಿತು. ಕೋಟೆಪ್ಪ ವರ್ದಿ, ನಾಗರಾಜ ದೊಡ್ಡಮನಿ, ಗುಡ್ಡಪ್ಪ ಮತ್ತೂರು, ಮಂಜುನಾಥ ಸೀತಮ್ಮನವರ, ಶಿವಾನಂದ ಮಾದರ, ಮಲ್ಲಿಕಾರ್ಜುನ ಪೂಜಾರ ಹಾಗೂ ಬಸವರಾಜ ಗೋದಿ ಅವರನ್ನು ಸಂಘಟನಾ ಸಂಚಾಲಕರಾಗಿ ನೇಮಕ ಮಾಡಲಾಯಿತು. ಗೋಣೆಪ್ಪ ಹರಿಜನ ಅವರನ್ನು ಖಜಾಂಚಿಯಾಗಿ ಹಾಗೂ ಹನಮಂತಪ್ಪ ಮಾದರ, ಬಸವರಾಜ ಹೆಚ್., ಶಿವಾನಂದ ತಳಗೇರಿ ಮತ್ತು ಶಿವಾನಂದ ಕಡೆಮನಿ ಅವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳು ಸಂಘಟನೆಯ ಆಶಯಗಳಿಗೆ ಅನುಗುಣವಾಗಿ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆ ಹಾಗೂ ಸಂಘಟನೆಯ ವಿಸ್ತರಣೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ದುರ್ಗಪ್ಪ ಎಲ್.ಎಚ್., ಗಾಳೆಪ್ಪ ಎಚ್. ಹರಿಜನ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img