ಆಡಳಿತ ಯಂತ್ರಕ್ಕೆ ಸರ್ಜರಿ: ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ!

0
Spread the love

ಬೆಂಗಳೂರು:- ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರವು ಐವರು ಐಪಿಎಸ್ ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಿ++++

Advertisement

ದೇಶ ಹೊರಡಿಸಿದೆ.

ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳ ವಿವರ:

* ಎಡಿಜಿಪಿ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

* ಪೊಲೀಸ್ ದೂರು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ಎಸ್.ರವಿ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

* ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಕೆ.ವಿ.ಶರತ್ ಚಂದ್ರ ಅವರನ್ನು ಪೊಲೀಸ್ ದೂರು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.

* ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

* ಕಮ್ಯುನಿಕೇಷನ್, ಲಾಜಿಸ್ಟಿಕ್ ಅಂಡ್ ಮಾಡ್ರನೈಝೇಷನ್ ವಿಭಾಗದ ಎಡಿಜಿಪಿ ಎಸ್.ಮುರುಗನ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here