ಬೆಂಗಳೂರು: ಒಂದೇ ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎರಡು ಮಹತ್ವದ ಕ್ಲೋಸ್ ಡೋರ್ ಸಭೆಗಳನ್ನು ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಆಯೋಜನೆಗೊಂಡಿದ್ದ ಮನರೇಗಾ ಬಚಾವೋ ಸಂಗ್ರಾಮ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಲು ಅವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ದೆಹಲಿಗೆ ತೆರಳಲು ಜಕ್ಕೂರು ಏರೋಡ್ರೋಮ್ಗೆ ಆಗಮಿಸಿದರು.
ಈ ವೇಳೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಅದಾದ ಬಳಿಕ ಡಿಕೆ ಶಿವಕುಮಾರ್ ಅವರೊಂದಿಗೆ ಪ್ರತ್ಯೇಕವಾಗಿ ಸುಮಾರು ಒಂದು ಗಂಟೆ ಕಾಲ ಕ್ಲೋಸ್ ಡೋರ್ ಸಭೆ ನಡೆಸಿ ನಂತರ ದೆಹಲಿಯತ್ತ ಪ್ರಯಾಣ ಬೆಳೆಸಿದರು.
ಸಭೆಯ ವಿಷಯಾವಳಿ ಬಹಿರಂಗವಾಗಿಲ್ಲದಿದ್ದರೂ, ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಸಭೆಗಳು ಮಹತ್ವ ಪಡೆದುಕೊಂಡಿವೆ.



