HomeKarnataka Newsಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು1: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು. ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು.

ಉತ್ತರಕರ್ನಾಟಕದಲ್ಲಿ ಹೆಚ್ಚು ಪ್ರವಾಹ
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದರು.

ಕೇಂದ್ರದ ಪ್ರವಾಹ ಪರಿಹಾರ ಕೊಡಿಸಲಿ

ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಸಲ್ಲಿಸುವುದು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!