HomeBengaluru Newsಅ.2, 4ರಂದು ಭೂಮಾಪಕ, ವಿಎಒ ಪರೀಕ್ಷೆ: ಕೆಇಎಯಿಂದ ಬಿಗಿ ಭದ್ರತೆ!

ಅ.2, 4ರಂದು ಭೂಮಾಪಕ, ವಿಎಒ ಪರೀಕ್ಷೆ: ಕೆಇಎಯಿಂದ ಬಿಗಿ ಭದ್ರತೆ!

For Dai;y Updates Join Our whatsapp Group

ಬೆಂಗಳೂರು: ರಾಜ್ಯದಲ್ಲಿ ಉಳಿಕೆ ಮೂಲ ವೃಂದದ ಭೂಮಾಪಕ ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಜ್ಜಾಗಿದೆ.

ಅ.2ರಂದು ಭೂಮಾಪಕರ ಹುದ್ದೆಗೆ ಹಾಗೂ ಅ.4ರಂದು ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಪರೀಕ್ಷೆಗಳು ನಡೆಯಲಿವೆ.

ಭೂಮಾಪಕ ಹುದ್ದೆಯ ಪರೀಕ್ಷೆಗೆ 92,701 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯಾದ್ಯಂತ 225 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದೇ ವೇಳೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 4,11,656 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 505 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷೆ ವೇಳೆ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಕೆಇಎ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕ್ಯಾಮರಾ ಕಣ್ಗಾವಲು ವ್ಯವಸ್ಥೆ ಮಾಡಲಾಗಿದ್ದು, ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷಾ ಪ್ರಕ್ರಿಯೆಯನ್ನು ನೇರವಾಗಿ ಮೇಲ್ವಿಚಾರಣೆ ಮಾಡಲು ಕೆಇಎ ಪ್ರಧಾನ ಕಚೇರಿಯಲ್ಲಿ ವಿಶೇಷ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಪರೀಕ್ಷೆಯ ಉಸ್ತುವಾರಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಹಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ಗಳನ್ನು ಅಳವಡಿಸುವ ಮೂಲಕ ಎಲೆಕ್ಟ್ರಾನಿಕ್ ಸಾಧನಗಳ ದುರ್ಬಳಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಪರಿಶೀಲನೆ ನಡೆಸಲಾಗುತ್ತದೆ. ತಪಾಸಣಾ ಕಾರ್ಯಕ್ಕೆ ಸ್ಥಳೀಯ ಪೊಲೀಸರ ಜತೆಗೆ ಗೃಹ ರಕ್ಷಕ ದಳದ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

ಇನ್ನು ಪರೀಕ್ಷೆ ಮುಗಿದ ಕೂಡಲೇ ಅಭ್ಯರ್ಥಿಗಳ ಒಎಂಆರ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಕೆಇಎ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಮಾತ್ರವಲ್ಲದೆ ಕಲಬುರಗಿ, ರಾಯಚೂರು, ಧಾರವಾಡ, ಬಳ್ಳಾರಿ, ವಿಜಯಪುರ, ದಾವಣಗೆರೆ ಹಾಗೂ ಮೈಸೂರು ನಗರಗಳಲ್ಲಿಯೂ ಒಎಂಆರ್ ಸ್ಕ್ಯಾನಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವಂತೆ ಹಾಗೂ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img