ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಸೂರ್ಯಕುಮಾರ್ ಯಾದವ್ ಅವರು ಅರ್ಧಶತಕ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದಲ್ಲದೆ ಅವರು ಟಿ20 ಕ್ರಿಕೆಟ್‌ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ.
ಇನ್ನೂ ಈ ಪಂದ್ಯದ ಬಳಿಕ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಮಳೆ ಬರಲಾರಂಭಿಸಿತು. ಇತ್ತ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯಲು ಸೂರ್ಯಕುಮಾರ್ ಯಾದವ್ ಕೊಡೆ ಹಿಡಿದು ಬಂದು ಎಲ್ಲರ ಗಮನ ಸೆಳೆದರು. ಇದೀಗ ಈ ವಿಡಿಯೋ ವೈರಲ್ ಆಗಿದೆ.
ಇನ್ನು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ಮಾತನಾಡಿದ ಸೂರ್ಯಕುಮಾರ್ ಯಾದವ್, ಈ ಪಂದ್ಯಕ್ಕೂ ಮುನ್ನ ನನ್ನ ಹೆಂಡ್ತಿ ವಿಷಯ ಹೇಳಿದ್ದಳು. ಈಗಾಗಲೇ 13 ಪಂದ್ಯಗಳು ಮುಗಿದಿವೆ. ನಿಮಗೆ ಎಲ್ಲಾ ಪ್ರಶಸ್ತಿಗಳು ಸಿಕ್ಕಿವೆ. ಆದರೆ ಈವರೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದಲ್ಲ ಎಂದು ನೆನಪಿಸಿದ್ದಳು.
ಹೀಗಾಗಿ ಇಂದಿನ ಪಂದ್ಯ ಶ್ರೇಷ್ಠ ಪ್ರಶಸ್ತಿ ನನಗೆ ತುಂಬಾ ವಿಶೇಷವಾದದ್ದು. ತಂಡದ ದೃಷ್ಟಿಕೋನದಿಂದ ಈ ಇನ್ನಿಂಗ್ಸ್ ಮುಖ್ಯವಾಗಿತ್ತು, ಈ ಪ್ರಶಸ್ತಿ ಅವಳಿಗಾಗಿ (ಹೆಂಡ್ತಿಗೆ) ಎಂದು ಸೂರ್ಯಕುಮಾರ್ ಯಾದವ್ ಹೇಳಿದರು.