ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧಿಸಿದ ಎನ್​ಐಎ

0
Spread the love

ಬೆಂಗಳೂರು:- ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬೆಂಗಳೂರಿನಲ್ಲಿ ಎನ್​ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಅಲಿ ಅಬ್ಬಾಸ್ ಮನೆ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ದಿನ‌ ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಲಾಗಿತ್ತು. ಇದಾದ ಬಳಿಕ ದಾಖಲೆಗಳ‌ ಪರಿಶೀಲನೆ ನಡೆಸಿ ಮತ್ತಷ್ಟು ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದಿದ್ದರು. ಸದ್ಯ ಈಗ ಅಬ್ಬಾಸ್ ಅಲಿಯನ್ನ ಬಂಧಿಸಿ ತೀವ್ರ ವಿಚಾರಣೆ ನಡೆಸ್ತಿದ್ದಾರೆ.

Advertisement

ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಐಸಿಸ್ ನೊಂದಿಗೆ ಸಂಪರ್ಕದಲ್ಲಿದ್ದ 15 ಶಂಕಿತರನ್ನ ಬಂಧಿಸಿ, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದರು. ಅದರಲ್ಲಿ ಐಎಸ್‌ (ಇಸ್ಲಾಮಿಕ್ ಸ್ಟೇಟ್) ಸಂಘಟನೆ ಜೊತೆ ನಂಟು ಹೊಂದಿ ಯುವಕರನ್ನು ಪ್ರಚೋದಿಸುತ್ತಿದ್ದ ಆರೋಪದಡಿ ಅಲಿ ಹಫೀಜ್ ಅಲಿಯಾಸ್ ಅಲಿ ಅಬ್ಬಾಸ್‌ ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.


Spread the love

LEAVE A REPLY

Please enter your comment!
Please enter your name here