ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದ ಘಟನೆ……!
ವಿಜಯಸಾಕ್ಷಿ ಸುದ್ದಿ, ಹಾವೇರಿ
ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದಲ್ಲಿ ನಡೆದಿದೆ.
ದಂಪತಿಗಳ ದುರ್ಮರಣದಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ತೋಟದ ಮನೆಯಲ್ಲಿ ಪತ್ನಿ ದ್ರಾಕ್ಷಾಣೆವ್ವ(45)ಳನ್ನು ಮಚ್ಚಿನಿಂದ ಕೊಲೆಗೈದ ಗಂಡ ಪ್ರಭು ವಾರತಿ(52) ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಹೆಂಡತಿಯ ಶೀಲದ ಬಗ್ಗೆ ಅನುಮಾನಪಟ್ಟ ಪ್ರಭು, ನಿತ್ಯವೂ ಮನೆಯಲ್ಲಿ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಮಂಗಳವಾರ ಜಗಳ ವಿಕೋಪಕ್ಕೆ ಹೋಗಿತ್ತು.
ಪತಿ-ಪತ್ನಿಯರ ನಡುವೆ ಹೊಡೆದಾಟ ನಡೆದ ಬಳಿಕ ಪ್ರಭು ಮಚ್ಚಿನಿಂದ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ, ಬಳಿಕ ತಾನೂ ಮನೆಯೆದುರೇ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯ ಸ್ಥಳಕ್ಕೆ ಎಸ್‌ಪಿ ಶಿವಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.