ಬೆಂಗಳೂರು: ಅಮಾನತು ವಾಪಸ್ ಸರ್ಕಾರಕ್ಕೆ ಹಿನ್ನಡೆ ಅಲ್ಲ. ಇದು ಆಡಳಿತಾತ್ಮಕ ನಿರ್ಧಾರ ಅಷ್ಟೇ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬಿ.ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ವಿಧಿಸಲಾಗಿದ್ದ ಅಮಾನತು ಆದೇಶ ಹಿಂಪಡೆಯಲಾಗಿದೆ.
ಇನ್ನೂ ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ, ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪುಟದಲ್ಲಿ ಚರ್ಚೆ ಮಾಡಲಾಯ್ತು. ಸಂಪುಟದ ತೀರ್ಮಾನದಂತೆ ಅಮಾನತು ವಾಪಸ್ ಪಡೆಯಲಾಗಿದೆ. ಆದ್ರೆ ಪ್ರಕರಣದ ಬಗ್ಗೆ ವಿಚಾರಣೆ ಮುಂದುವರೆಯಲಿದೆ ಎಂದರು.
ಇನ್ನೂ ರಾಜ್ಯ ಸರ್ಕಾರದ ಅಮಾನತು ಆದೇಶ ಪ್ರಶ್ನಿಸಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸಿಎಟಿಗೆ ಅರ್ಜಿ ಸಲ್ಲಿಸಿದ್ರು. ಇವರ ಅಮಾನತು ವಾಪಸ್ ಪಡೆದಿಲ್ಲ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಅಮಾನತು ವಾಪಸ್ ಸರ್ಕಾರಕ್ಕೆ ಹಿನ್ನಡೆ ಅಲ್ಲ. ಇದು ಆಡಳಿತಾತ್ಮಕ ನಿರ್ಧಾರ ಅಷ್ಟೇ, ತನಿಖೆ ಮುಂದುವರೆಯುತ್ತೆ ಎಂದು ಹೇಳಿದ್ದಾರೆ.