18 ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್‌.. ಸ್ಪೀಕರ್ ಯುಟಿ ಖಾದರ್ ಹೇಳಿದ್ದೇನು?

0
Spread the love

ಬೆಂಗಳೂರು:- ಸ್ಪೀಕರ್ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ವಾಪಸ್ ಪಡೆಯಲಾಗಿದೆ.

Advertisement

ಈ ಹಿಂದೆ ಹನಿಟ್ರ್ಯಾಪ್​ ಮತ್ತು ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆದಿತ್ತು. ಆ ವೇಳೆ ಬಿಜೆಪಿ ಶಾಸಕರು ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮೂಲಕ​​ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಿ ಖಾದರ್​ ಆದೇಶಿಸಿದ್ದರು. ಆದರೆ, ಇದೀಗ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ.

ಅಮಾನತು ಆದೇಶವನ್ನು ವಾಪಸ್ ಪಡೆದ ಬಳಿಕ ಮಾತನಾಡಿದ ಯುಟಿ ಖಾದರ್, ಶಾಸಕರ ಅಮಾನತು ಆದೇಶವನ್ನ ಹಿಂಪಡೆಯಲಾಗಿದೆ. ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಹ ಸಲ್ಲಿಸಿದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಸಂತೋಷದಿಂದ ಶಾಸಕರ ಅಮಾನತು ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮಕೈಗೊಂಡೆ. ಕ್ರಮತೆಗೆದುಕೊಳ್ಳುವುದಕ್ಕೆ ನನಗೆ ಅಧಿಕಾರವಿದೆ ಎಂದು ಸ್ಪೀಕರ್​ ಯು.ಟಿ.ಖಾದರ್​ ಹೇಳಿದರು.

ಬಿಜೆಪಿಯ 18 ಶಾಸಕರ ಅಮಾನತು ಹಿಂಪಡೆಯುವ ಸಂಬಂಧ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್​. ಅಶೋಕ್, ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಭಾಗಿಯಾಗಿದ್ದರು.


Spread the love

LEAVE A REPLY

Please enter your comment!
Please enter your name here