ಪತ್ನಿಯ ಶೀಲದ ಮೇಲೆ ಶಂಕೆ: ಭೀಕರವಾಗಿ ಹೆಂಡತಿ ಕೊಲೆಗೈದ ಪಾಪಿ ಗಂಡ!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೆಂಗೇರಿಯಲ್ಲಿ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ ಜರುಗಿದೆ.

Advertisement

25 ವರ್ಷದ ನವ್ಯಾ ಕೊಲೆಯಾದ ಮಹಿಳೆ. ಈಕೆಯ ಪತಿ ಕಿರಣ್‌ ಕೊಲೆಗೈದ ಆರೋಪಿಯಾಗಿದ್ದಾನೆ. ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು.

ಪತ್ನಿಯ ಶೀಲ ಶಂಕಿಸಿ, ಆಕೆಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ನೀಡಿ, ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಕೆಂಗೇರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.


Spread the love

LEAVE A REPLY

Please enter your comment!
Please enter your name here