ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆ: ಫ್ಲೈಓವರ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಶಂಕೆ!

0
Spread the love

ಬೆಂಗಳೂರು:– ಏರ್‌ಪೋರ್ಟ್ ರೋಡ್‌ನ ಮಾಲ್ ಆಫ್ ಏಷ್ಯಾ ಮುಂಭಾಗದ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಜರುಗಿದೆ. ಫ್ಲೈಓವರ್ ಮೇಲಿಂದ ಬಿದ್ದು ಯುವಕ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Advertisement

22 ವರ್ಷದ ಮುನಿರಾಜ್ ಮೃತ ಯುವಕ. ಹೆಬ್ಬಾಳದ ಶಿವಶಂಕರ್ ಲೇಔಟ್ ನಿವಾಸಿಯಾಗಿರುವ ಮುನಿರಾಜ್, ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ಭಾನುವಾರ ತನ್ನ ತಾಯಿಗೆ ಸ್ನೇಹಿತರನ್ನು ಭೇಟಿಯಾಗಿ ಬರುತ್ತೇನೆಂದು ಹೇಳಿ ಹೊರಟಿದ್ದ. ಫ್ಲೈಓವರ್ ಮೇಲೆ ಬೈಕ್ ನಿಲ್ಲಿಸಿ ಬಳಿಕ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಉಂಟಾಗಿದೆ. ಫ್ಲೈಓವರ್ ಕೆಳಭಾಗದ ರಸ್ತೆಯಲ್ಲಿ ಯುವಕನ ಶವ ಬಿದ್ದಿದ್ದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತ ತಡರಾತ್ರಿಯಾದರೂ ಮಗ ಮನೆಗೆ ಬಂದಿಲ್ಲ ಎಂದು ತಾಯಿ ಒಂದೇ ಸಮನೇ ಕರೆ ಮಾಡಿದ್ದು, ಪೊಲೀಸರು ಮಗ ಸಾವನ್ನಪ್ಪಿರುವ ಕುರಿತು ಮಾಹಿತಿ ನೀಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ಹೆದ್ದಾರಿಯ ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದು, ಸಾವನ್ನಪ್ಪಿದ್ದು ಹೇಗೆ ಎಂದು ತನಿಖೆಯಲ್ಲಿ ಹೊರಬರಬೇಕಿದೆ.


Spread the love

LEAVE A REPLY

Please enter your comment!
Please enter your name here