ಸ್ವಚ್ಛತೆ ಮೊದಲ ಆದ್ಯತೆಯಾಗಿರಲಿ : ಮಂಜುಳಾ ಹಕಾರಿ

0
Swachhta Hi Seva Janandola program
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಪ್ರತಿಯೊಬ್ಬರೂ ನಿಮ್ಮ ಮನೆ ಹಾಗೂ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟಾಗ ಮಾತ್ರ ನಿಮ್ಮ ಗ್ರಾಮ ಸುಂದರವಾಗಿ ಕಾಣಲು ಸಾಧ್ಯ. ಹಾಗಾಗಿ, ತಾವೆಲ್ಲರೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ ಎಂದು ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಹೇಳಿದರು.

Advertisement

ರೋಣ ತಾಲೂಕಿನ ಹಿರೇಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿಯಲ್ಲಿ ಸ್ವಚ್ಛತಾ ಹಿ ಸೇವಾ ಜನಾಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ವರ್ಷ ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ರೋಣ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಇಂದಿನಿಂದ ಅಕ್ಟೋಬರ್ ೨ರವರಗೆ ಆಚರಿಸಲಾಗುತ್ತಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ ೨ನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ತಾ.ಪಂ ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಬಿ.ಕಂದಕೂರ ಗ್ರಾಮದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ನಿಮ್ಮ ಗ್ರಾಮಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಿಂದ ಹಾಗೂ ಗಲೀಜಿನಿಂದ ಗ್ರಾಮದಲ್ಲಿ ವಿವಿಧ ರೀತಿಯ ಕಾಯಿಲೆಗಳು ಬರುತ್ತವೆ. ಆದ್ದರಿಂದ, ಸ್ವಚ್ಛತೆಗೆ ಒತ್ತು ನೀಡಿ ಕಾಯಿಲೆಯಿಂದ ದೂರವಾಗುವದರ ಜೊತೆಗೆ ಆರೋಗ್ಯವಂತ ಹಾಗೂ ಸುಂದರ ಗ್ರಾಮವನ್ನು ನಿಮ್ಮದಾಗಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರೇಣವ್ವ ಲಕ್ಕಪ್ಪ ಗುಡಿಮನಿ, ಉಪಾಧ್ಯಕ್ಷರಾದ ನೀಲಪ್ಪ ವಿರಪ್ಪ ದಳಪತಿ, ಗ್ರಾಮ ಪಂಚಾಯಿತಿ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳಾದ ಬಿ.ಎಸ್. ದಳವಾಯಿ, ಗ್ರಾಮದ ಸ್ವಚ್ಛ ಗಾಯಿಗಳು, ಆಶಾ ಕಾರ್ಯಕರ್ತರು, ತಾಲೂಕು ಪಂಚಾಯಿತಿ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.

ಹಿರೇಹಾಳ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ `ಸ್ವಚ್ಛತಾ ಹಿ ಸೇವಾ’ ಆಂದೋಲನದ ಅಂಗವಾಗಿ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ನಂತರ ಮಕ್ಕಳ ಜೊತೆಗೂಡಿ ಗ್ರಾಮದ ಬೀದಿ ಬೀದಿಗಳಲ್ಲಿ ರ‍್ಯಾಲಿ ಮಾಡುವ ಮೂಲಕ ಜನರಲ್ಲಿ ವಿಶೇಷ ಜಾಗೃತಿ ಮೂಡಿಸಲಾಯಿತು.

ಹಿರೇಹಾಳ ಗ್ರಾಮದ ಬಸ್ ನಿಲ್ದಾಣದಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಮಂಜುಳಾ ಹಕಾರಿ, ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಬಿ.ಕಂದಕೂರ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಎಸ್. ದಳವಾಯಿ ಸತಃ ತಾವೇ ಕಸ ಗುಡಿಸಿ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು.


Spread the love

LEAVE A REPLY

Please enter your comment!
Please enter your name here