ಗೃಹ ಜ್ಯೋತಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಏನು ವಿಚಾರ ಗೊತ್ತಾ!?

0
Spread the love

ಬೆಂಗಳೂರು:- ನೀವು ಗೃಹಜ್ಯೋತಿ ಫಲಾನುಭವಿಗಳಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ.

Advertisement

ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.

ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಗ್ರಾಹಕರು https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌.ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here