ದೊಡ್ಡಬಳ್ಳಾಪುರ:- ರಸ್ತೆಯಲ್ಲಿ ಚಲಿಸುತ್ತಿದ್ದ ಸ್ವಿಫ್ಟ್ ಕಾರು ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಯಲಹಂಕ ರಸ್ತೆಯ ಮಾರಸಂದ್ರ ಬಳಿಯಲ್ಲಿ ಅವಘಡ ಸಂಭವಿಸಿದೆ.
ಅದೃಷ್ಟವಶಾತ್ ವಕೀಲರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ವಕೀಲರ ಕುಟುಂಬ, ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಇದ್ದಕ್ಕಿದಂತೆ ಕಾರು ಹೊತ್ತಿ ಉರಿದಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.



