HomeSports NewsIndia vs New Zealand: ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ ಮೋದಿ ಸ್ಟೇಡಿಯಂ ಪಿಚ್ ಹೇಗಿದೆ?

India vs New Zealand: ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ ಮೋದಿ ಸ್ಟೇಡಿಯಂ ಪಿಚ್ ಹೇಗಿದೆ?

For Dai;y Updates Join Our whatsapp Group

Spread the love

ಅಹಮದಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದ ಪಿಚ್ ಬ್ಯಾಟಿಂಗ್‌ಗೆ ಪೂರಕವಾಗಿರಲಿದೆ ಎಂದು ವರದಿಯಾಗಿದೆ.

ಈ ಪಿಚ್ ಕಪ್ಪು ಹಾಗೂ ಕೆಂಪು ಮಣ್ಣಿನ ಮಿಶ್ರಣದಿಂದ ನಿರ್ಮಿತವಾಗಿದ್ದು, ಬ್ಯಾಟ್ಸ್‌ಮನ್‌ಗಳಿಗೆ ಉತ್ತಮ ನೆರವು ನೀಡಲಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಿಚ್‌ನಂತೆ ಉತ್ತಮ ಬೌನ್ಸ್ ಹೊಂದಿದ್ದು, ಆರಂಭದಲ್ಲಿ ಸೀಮರ್‌ಗಳಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಈ ಪಿಚ್‌ನಲ್ಲಿ 200 ರನ್‌ಗಳಿಗೂ ಹೆಚ್ಚು ಸ್ಕೋರ್ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ ಈ ಪಿಚ್‌ನಲ್ಲಿ ಕೇವಲ ಒಂದು ಪಂದ್ಯ ಮಾತ್ರ ನಡೆದಿದ್ದು, ಫೆಬ್ರವರಿ 9ರಂದು ಕೆನಡಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಇದೇ ಪಿಚ್‌ನಲ್ಲಿ ನಡೆದಿತ್ತು.

ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 4 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಕೆನಡಾ 8 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತ್ತು.

ಇಲ್ಲಿಯವರೆಗೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದು, ಮೂರು ಪಂದ್ಯಗಳನ್ನೂ ನ್ಯೂಜಿಲೆಂಡ್ ಗೆದ್ದಿದೆ. 2007ರಲ್ಲಿ ನ್ಯೂಜಿಲೆಂಡ್ 10 ವಿಕೆಟ್‌ಗಳಿಂದ ಗೆದ್ದರೆ, 2016ರಲ್ಲಿ 47 ರನ್‌ಗಳಿಂದ ಜಯ ಸಾಧಿಸಿತ್ತು. ಆ ಪಂದ್ಯದಲ್ಲಿ ಭಾರತ ಕೇವಲ 79 ರನ್‌ಗೆ ಆಲೌಟ್ ಆಗಿತ್ತು. 2021ರ ಪಂದ್ಯದಲ್ಲಿಯೂ ನ್ಯೂಜಿಲೆಂಡ್ 8 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!