HomeSports NewsT20 World Cup: ದೀಪ್ತಿ ಸ್ಪಿನ್ ಜಾದೂಗೆ ಪಾಕ್ ಪತನ: ಪಾಕಿಸ್ತಾನ ವಿರುದ್ಧ ಭಾರತ ಮಹಿಳೆಯರ...

T20 World Cup: ದೀಪ್ತಿ ಸ್ಪಿನ್ ಜಾದೂಗೆ ಪಾಕ್ ಪತನ: ಪಾಕಿಸ್ತಾನ ವಿರುದ್ಧ ಭಾರತ ಮಹಿಳೆಯರ ಭರ್ಜರಿ ಗೆಲುವು!

For Dai;y Updates Join Our whatsapp Group

Spread the love

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಅದ್ಭುತ ಪ್ರದರ್ಶನ ನೀಡಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 64 ರನ್‌ಗಳಿಂದ ಮಣಿಸಿದೆ. ಸ್ಮೃತಿ ಮಂಧಾನ ಅವರ ಸ್ಫೋಟಕ ಅರ್ಧಶತಕ ಹಾಗೂ ದೀಪ್ತಿ ಶರ್ಮಾ ಅವರ ಮಾರಕ ಬೌಲಿಂಗ್ ನೆರವಿನಿಂದ ಭಾರತ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್‌ಗಳ ಬಲಿಷ್ಠ ಮೊತ್ತ ಕಲೆಹಾಕಿತು. ಗೆಲುವಿಗೆ 171 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ಆರಂಭದಲ್ಲಿ ಉತ್ತಮ ಹಾದಿಯಲ್ಲಿದ್ದರೂ, ಮಧ್ಯಮ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿ 106 ರನ್‌ಗಳಿಗೆ ಆಲೌಟ್ ಆಯಿತು.

ಭಾರತದ ಇನ್ನಿಂಗ್ಸ್ ಆರಂಭದಲ್ಲೇ ಶಫಾಲಿ ವರ್ಮಾ (6) ಹಾಗೂ ಜೆಮಿಮಾ ರೋಡ್ರಿಗ್ಸ್ (1) ವಿಕೆಟ್ ಕಳೆದುಕೊಂಡು ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಮೂರನೇ ವಿಕೆಟ್‌ಗೆ ಜೊತೆಯಾದ ಸ್ಮೃತಿ ಮಂಧಾನ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಇಬ್ಬರೂ 61 ಎಸೆತಗಳಲ್ಲಿ 91 ರನ್‌ಗಳ ಅಮೂಲ್ಯ ಜೊತೆಯಾಟ ನಡೆಸಿದರು. ಹರ್ಮನ್‌ಪ್ರೀತ್ 36 ರನ್‌ಗಳ ಕೊಡುಗೆ ನೀಡಿದರೆ, ಸ್ಮೃತಿ ಮಂಧಾನ ಕೇವಲ 44 ಎಸೆತಗಳಲ್ಲಿ 68 ರನ್ ಸಿಡಿಸಿ ಮಿಂಚಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳು ಸೇರಿದ್ದವು.

ಕೊನೆಯಲ್ಲಿ ರಿಚಾ ಘೋಷ್ ಮತ್ತು ದೀಪ್ತಿ ಶರ್ಮಾ ಜೋಡಿ ವೇಗದ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು ಮತ್ತಷ್ಟು ಹೆಚ್ಚಿಸಿತು. ರಿಚಾ ಘೋಷ್ ಕೇವಲ 17 ಎಸೆತಗಳಲ್ಲಿ 34 ರನ್ ಗಳಿಸಿ ತಂಡಕ್ಕೆ ಬಲ ತುಂಬಿದರು.

171 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ 6.2 ಓವರ್‌ಗಳಲ್ಲಿ 53 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಈ ಹಂತದಲ್ಲಿ ದೀಪ್ತಿ ಶರ್ಮಾ ಪಂದ್ಯದ ದಿಕ್ಕನ್ನೇ ಬದಲಿಸಿದರು.

ಅದ್ಭುತ ಸ್ಪಿನ್ ಬೌಲಿಂಗ್ ಪ್ರದರ್ಶಿಸಿದ ದೀಪ್ತಿ, ನಾಲ್ಕು ಓವರ್‌ಗಳಲ್ಲಿ ಕೇವಲ 10 ರನ್ ನೀಡಿ ಐದು ಪ್ರಮುಖ ವಿಕೆಟ್ ಕಬಳಿಸಿದರು. ಅವರ ದಾಳಿಗೆ ಪಾಕಿಸ್ತಾನ ತಂಡ ಕೇವಲ 53 ರನ್‌ಗಳ ಅಂತರದಲ್ಲಿ ಉಳಿದ ಒಂಬತ್ತು ವಿಕೆಟ್‌ಗಳನ್ನು ಕಳೆದುಕೊಂಡು ಕುಸಿದುಬಿತ್ತು.

ಪಾಕಿಸ್ತಾನದ ಪರ ಮುನೀಬಾ ಅಲಿ 41 ರನ್ ಗಳಿಸಿ ಹೋರಾಟ ನಡೆಸಿದರೂ, ಅವರು ರನೌಟ್ ಆದ ಬಳಿಕ ಪಾಕ್ ತಂಡದ ಪ್ರತಿರೋಧ ಸಂಪೂರ್ಣ ಕುಸಿಯಿತು. ಶ್ರೀ ಚರಣಿ ಮೂರು ವಿಕೆಟ್ ಹಾಗೂ ಶಫಾಲಿ ವರ್ಮಾ ಒಂದು ವಿಕೆಟ್ ಪಡೆದು ದೀಪ್ತಿಗೆ ಉತ್ತಮ ಸಾಥ್ ನೀಡಿದರು. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರು ವಿಭಾಗಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ ದೀಪ್ತಿ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!