Zakir Hussain: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನ!

0
Spread the love

ದೆಹಲಿ:- ತಬಲಾ ಮಾಂತ್ರಿಕ 73 ವರ್ಷದ ಜಾಕಿರ್ ಹುಸೇನ್ ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

Advertisement

ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಗ್ರ್ಯಾಮಿ ಪ್ರಶಸ್ತಿ ವಿಜೇತ ಜಾಕೀರ್‌ ಅವರು ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

ಜಾಕಿರ್ ಹುಸೇನ್ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್​, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಮಾರ್ಚ್ 9, 1951 ರಂದು ಮುಂಬೈನಲ್ಲಿ ಜನಿಸಿದ ಜಾಕಿರ್ ಹುಸೇನ್, ಚಿಕ್ಕ ವಯಸ್ಸಿನಿಂದಲೂ ಸಂಗೀತದ ವಾತಾವರಣದಲ್ಲಿ ಬೆಳೆದವರು. ಅವರು ನಿಧನ ಹೊಂದಿದ ವಿಚಾರ ಸಾಕಷ್ಟು ಬೇಸರ ತರಿಸಿದೆ.


Spread the love

LEAVE A REPLY

Please enter your comment!
Please enter your name here