ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿ ಪಟ್ಟಣದಲ್ಲಿ ಡೆಂಗ್ಯೂ, ಮಲೇರಿಯಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಕೊಳ್ಳುವಂತೆ ಕರ್ನಾಟಕ ಯುವರಕ್ಷಣಾ ವೇದಿಕೆ ತಾಲೂಕಾ ಘಟಕದ ವತಿಯಿಂದ ಪ.ಪಂ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾಧ್ಯಕ್ಷ ರಿಯಾಜ ತಹಸೀಲ್ದಾರ, ಜಿಲ್ಲೆಯಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ರಾಜ್ಯದಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.
ಪಟ್ಟಣದ ಎಲ್ಲಾ ವಾರ್ಡ್ಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಮನೆಯಲ್ಲಿ ಸಂಗ್ರಹಿಸಿಟ್ಟಿರುವ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಚರಂಡಿಗಳಲ್ಲಿ ಸರಿಯಾಗಿ ನೀರು ಹರಿಯದೇ ಇರುವುದರಿಂದ ನೀರು ನಿಂತು ದುರ್ವಾಸನೆ ಬೀರುತ್ತಿವೆ. ಆದ್ದರಿಂದ ಪಟ್ಟಣದ ಎಲ್ಲಾ ವಾರ್ಡ್ಗಳಲ್ಲಿ ಸೊಳ್ಳೆ ನಿಯಂತ್ರಣದ ಔಷಧಿಯನ್ನು ಸಿಂಪಡಿಸಿ, ಚರಂಡಿಗಳನ್ನು ಸ್ವಚ್ಛಗೊಳಿಸಿ, ಧ್ವನಿವರ್ಧಕ ಮೂಲಕ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಮನವಿ ಸಲ್ಲಿಸಿದರು.
ಮುಸ್ತಾಕ ಕುದರಿ, ಈರಣ್ಣ ಘಂಟಿ, ರಿಯಾಜ ಲಕ್ಷ್ಮೇಶ್ವರ ಉಪಸ್ಥಿತರಿದ್ದರು.


