ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ: ಬಿ ದಯಾನಂದ್ ಸೂಚನೆ

0
Spread the love

ಬೆಂಗಳೂರು: ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ​ ಬಿ ದಯಾನಂದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ, ಮುನ್ನೆಚ್ಚರಿಕೆ ವಹಿಸಿ.

Advertisement

ಮಾಲ್​ಗಳಲ್ಲಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡಿ ಎಂದರು. ಇನ್ನೂ ಎಲ್ಲ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರಬೇಕು. ಪೊಲೀಸ್​​ ಸಿಬ್ಬಂದಿ ಹೆಲ್ಮೆಟ್, ಲಾಠಿಗಳನ್ನು ಹೊಂದಿರಬೇಕು. ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ. ರಸ್ತೆ ಮೇಲೆ ಬಾಟಲಿ ಹೊಡೆದು ದಾಂದಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಕ್ರಮಕೈಗೊಳ್ಳಿ ಎಂದು ಹೇಳಿದ್ದಾರೆ.

 


Spread the love

LEAVE A REPLY

Please enter your comment!
Please enter your name here