ಮೈಸೂರು: ಜಮೀರ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕೆಲಸ ಕೆಪಿಸಿಸಿ ಅಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಎಲ್ಲ ಮೂರು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.
Advertisement
ಎಕ್ಸಿಟ್ ಪೋಲ್ ಗಳ ಸಮೀಕ್ಷೆ ಬೇರೆ ಇರಬಹುದು ಆದರೆ ಎಲ್ಲರೂ ಆಶ್ಚರ್ಯಪಡುವ ರೀತಿಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪರಮೇಶ್ವರ್ ಹೇಳಿದರು. ಜಮೀರ್ ಅಹ್ಮದ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕೆಲಸ ಕೆಪಿಸಿಸಿ ಅಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಹೇಳಿದರು.