ಬೆಳಗಾವಿ: ಮಠದಿಂದ ಕಿತ್ತುಕೊಳ್ಳುವುದು ಇದ್ಯಾವ ಸೀಮೆ ಪರಂಪರೆ ಎಂದು ಪರಿಷತ್ ಸದಸ್ಯ ಸಿಟಿ ರವಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಹಲವು ಮಠಗಳು ಅನ್ನದಾಸೋಹ, ಉಚಿತ ಶಿಕ್ಷಣ ನೀಡುತ್ತಿವೆ. ಹೀಗಾಗಿ ಮಠಗಳಿಗೆ ಕೊಡುವ ಪರಂಪರೆ ನಮ್ಮಲ್ಲಿದೆ.
ಮಠದಿಂದಲೇ ಕಿತ್ತುಕೊಳ್ಳುವ ಸರ್ಕಾರ ಯಾವ ಪರಿಸ್ಥಿತಿಗೆ ಬಂದಿದೆ? ಹಾಗಾದರೆ ಇವರು ಭಿಕಾರಿಗಳಾಗಿದ್ದಾರಾ? ನಾಚಿಕೆ ಆಗಲ್ವಾ? ನೋಟಿಸ್ ವಾಪಸ್ ಪಡೆದುಕೊಳ್ಳಿ. ಸುತ್ತಮುತ್ತ ಕೆರೆಗಳಿಗೆ ನೀರು ಹರಿಸಿದ್ದಕ್ಕೆ ಮಠಕ್ಕೆ ನೋಟಿಸ್ ಕೊಡುತ್ತೀರಾ? ಮಠಕ್ಕೆ ನೋಟಿಸ್ ಕೊಟ್ಟಿರುವ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳಿ ಎಂದು ರವಿ ಆಗ್ರಹಿಸಿದರು.



