ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಹಾತಲಗೇರಿ ರಸ್ತೆಯ ವಿವೇಕಾನಂದ ನಗರದ ಗಾಣಿಗ ಸಮುದಾಯ ಭವನದಲ್ಲಿ ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗ ವರ್ದಕ ಟ್ರಸ್ಟ ವತಿಯಿಂದ 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 2024-25ನೇ ಸಾಲಿನಲ್ಲಿ ನಿವೃತ್ತರಾದ ಗಾಣಿಗ ಸಮಾಜದ ಸರ್ಕಾರಿ ನೌಕರರಿಗೆ ಸನ್ಮಾನ ಹಾಗೂ ವಾರ್ಷಿಕ ಸಭೆಯು ಜೂ. 15ರಂದು ಬೆಳಿಗ್ಗೆ 10.30ಕ್ಕೆ ಜರುಗಲಿದೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯ ನಕಲು ಪ್ರತಿ, ಪಾಸ್‌ಪೋರ್ಟ್ ಸೈಜಿನ ಭಾವಚಿತ್ರದೊಂದಿಗೆ ಹಾಗೂ ನಿವೃತ್ತ ನೌಕರರು ಜೂ. 8ರೊಳಗಾಗಿ ವಿವೇಕಾನಂದ ನಗರದ ಗಾಣಿಗ ಭವನ ಕಾರ್ಯಾಲಯ ಹಾಗೂ ಲಕ್ಕುಂಡಿ ಸ್ಟೀಲ್ ಕಾಟನ್ ಮಾರ್ಕೆಟ್ ರಸ್ತೆ ಗದಗ, ಎಂ.ಬಿ. ಬಡ್ನಿ ಮತ್ತು ಕಂ, ಎಪಿಎಂಸಿ ಯಾರ್ಡ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಮಾಹಿತಿಗಾಗಿ ಮೊಬೈಲ್ ಸಂಖ್ಯೆ-9448142509, 9945037111, 7795826957, 8970592837 ಸಂಪರ್ಕಿಸಬಹುದು ಎಂದು ಟ್ರಸ್ಟ್ನ ಅಧ್ಯಕ್ಷ ಬಸವರಾಜ ಬಿಂಗಿ, ಕಾರ್ಯದರ್ಶಿ ಎಂ.ಬಿ. ಬಡ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



