ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಜುಲೈ 12ರಂದು ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಸಮಾಜದ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2,230ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಆಯ್ಕೆಯಾದವರಿಗೆ ಗೌರವಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕೂಡಲ ಸಂಗಮದ ಶ್ರೀ ಬಸವಮೃತ್ಯುಂಜಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಸಚಿವ ಹಾಗೂ ನರಗುಂದ ಶಾಸಕ ಸಿ.ಸಿ. ಪಾಟೀಲ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಮುರಗೇಶ ನಿರಾಣಿ, ಶಾಸಕ ಅರವಿಂದ ಬೆಲ್ಲದ, ಮಾಜಿ ಸಚಿವ ಕಳಕಪ್ಪ ಬಂಡಿ, ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಶಿವಲೀಲಾ ಕುಲಕರ್ಣಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಮೇಶ ರೋಣದ, ಚಂದ್ರು ಪಾಟೀಲ, ಶರಣಪ್ಪ ಗೋಳಗೊಣಕಿ, ಕೆ.ವಿ. ಗದಗಿನ, ರವಿ ಮಾನೆ, ಕುಮಾರ ಗದಗಿನ, ಸಂಗಮೇಶ ಗೊಂದಿ, ಮಂಜುನಾಥ ಬಾಣದ ಸೇರಿದಂತೆ ಇತರರು ಉಪಸ್ಥಿತರಿದ್ದರು.



