HomeKarnataka Newsರೈತ ಮುಖಂಡರು–ಪ್ರಲ್ಹಾದ್ ಜೋಶಿ ಮಾತುಕತೆ ಯಶಸ್ವಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಬೊಮ್ಮಾಯಿ!

ರೈತ ಮುಖಂಡರು–ಪ್ರಲ್ಹಾದ್ ಜೋಶಿ ಮಾತುಕತೆ ಯಶಸ್ವಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಬೊಮ್ಮಾಯಿ!

ಹುಬ್ಬಳ್ಳಿ: ರೈತರ ವಿವಿಧ ಬೇಡಿಕೆಗಳ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಡುವೆ ನಡೆದ ಮಾತುಕತೆ ಸಮಾಧಾನಕರವಾಗಿ ಮುಕ್ತಾಯಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ರೈತರು ತಮ್ಮ ಬೇಡಿಕೆಗಳನ್ನು ಶಾಂತಿಯುತವಾಗಿ ಹಾಗೂ ಕಾನೂನುಬದ್ಧವಾಗಿ ಮಂಡಿಸಿರುವುದು ಅಭಿನಂದನಾರ್ಹ. ರೈತರ ಸಮಸ್ಯೆಗಳಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಸವರಾಜ ಬೊಮ್ಮಾಯಿ, ಹುಬ್ಬಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಚೂನಪ್ಪ ಪೂಜೇರಿ, ಶಶಿಕಾಂತ ಗುರೂಜಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಡುವೆ ನಡೆದ ಸಭೆಯನ್ನು ಸ್ವಾಗತಿಸಿದ್ದಾರೆ. ರೈತರು ಮತ್ತು ಜನಪ್ರತಿನಿಧಿಗಳ ನಡುವಿನ ಮಾತುಕತೆ ಅತ್ಯಂತ ಸಮಾಧಾನಕರವಾಗಿ ನಡೆದಿರುವುದು ಸಂತಸದ ವಿಚಾರ ಎಂದು ತಿಳಿಸಿದ್ದಾರೆ.

ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಶಾಂತಿಯುತ ಹಾಗೂ ಕಾನೂನುಬದ್ಧ ಮಾರ್ಗವನ್ನು ಅನುಸರಿಸುತ್ತಿದ್ದಾರೆ ಎಂಬುದು ಈ ಸಭೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ತಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ರೈತ ಮುಖಂಡರು ತೋರಿರುವ ಜವಾಬ್ದಾರಿಯುತ ನಡೆ ಅಭಿನಂದನಾರ್ಹ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇನ್ನು, ರೈತರ ಬೇಡಿಕೆಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಮಾತುಕತೆಗೆ ಉತ್ತಮ ವಾತಾವರಣ ನಿರ್ಮಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಸಭೆಯಲ್ಲಿ ಭಾಗವಹಿಸಿದ್ದ ಇತರ ಜನಪ್ರತಿನಿಧಿಗಳು ಹಾಗೂ ನಾಯಕರಿಗೂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಿರುವುದನ್ನು ಶ್ಲಾಘಿಸಿದ್ದಾರೆ.

ಮತ್ತೊಂದೆಡೆ, ರೈತ ಸಮುದಾಯ ಹಾಗೂ ರೈತ ಸಂಘದ ಮುಖಂಡರಿಗೆ ವಿಶೇಷವಾಗಿ ಧನ್ಯವಾದ ಸಲ್ಲಿಸಿರುವ ಬೊಮ್ಮಾಯಿ, ತಮ್ಮ ಬೇಡಿಕೆಗಳನ್ನು ಶಾಂತಿಯುತವಾಗಿ ಮಂಡಿಸುವ ಮೂಲಕ ರೈತರು ಉತ್ತಮ ಸಂದೇಶ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರೈತರ ಸಮಸ್ಯೆಗಳು ಕೇವಲ ಮಾತುಕತೆಗೆ ಸೀಮಿತವಾಗದೆ ಆದಷ್ಟು ಬೇಗ ಸಂಪೂರ್ಣವಾಗಿ ಬಗೆಹರಿಯಬೇಕು ಎಂಬ ಆಶಯವನ್ನೂ ವ್ಯಕ್ತಪಡಿಸಿದ್ದಾರೆ. ಈ ದಸರಾ ಹಬ್ಬದ ಶುಭ ಸಂದರ್ಭದಲ್ಲಿ ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು ಶೀಘ್ರ ಪರಿಹಾರವಾಗಲಿ ಎಂದು ಜಗನ್ಮಾತೆಯಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img