HomeGadag Newsರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಿ : ಶಶಿಕಾಂತ ಕೋಟಿಮನಿ

ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಿ : ಶಶಿಕಾಂತ ಕೋಟಿಮನಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ವಾಯುಬಾರ ಕುಸಿತದಿಂದ ತಾಲೂಕಿನಲ್ಲಿ ಸಾಕಷ್ಟು ಮಳೆಯಾಗಿದ್ದು, ಮಳೆಗೆ ಹಾಳಾಗಿದ್ದ ಬೆಳೆಗಳ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಮಾಡಿಕೊಂಡು ರೈತರಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಾ.ಪಂ ಆಡಳಿತಾಧಿಕಾರಿ ಶಶಿಕಾಂತ ಕೋಟಿಮನಿ ಸೂಚಿಸಿದರು.

ಪಟ್ಟಣದ ತಾ.ಪಂ ಚಿಂತನ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆಯಿಂದ ಹಾನಿಯಾದ ಬೆಳೆಗಳ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಎಂದಾಗ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾತನಾಡಿ, ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿದ್ದು, ಹಿಂಗಾರು ಬಿತ್ತನೆಗೆ ಬೀಜ ರಸಗೊಬ್ಬರ ಸಂಗ್ರಹಣೆ ಮಾಡಿ ವಿತರಣೆ ಮಾಡಲಾಗುತ್ತಿದೆ. ಹಿಂಗಾರಿನಲ್ಲಿ ಶೇ.52ರಷ್ಟು ಬಿತ್ತನೆ ಕಾರ್ಯ ಮುಗಿದಿದ್ದು, ಅತಿ ಹೆಚ್ಚು ಕಡಲೆ ಬಿತ್ತನೆಯಾಗಿದೆ. ಕೃಷಿ ಇಲಾಖೆಯಿಂದ ರೈತರಿಗಾಗಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಶೇ.26ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಕೃಷಿ ಹೊಂಡ ಸಹಾಯಧನವನ್ನು ರೈತರಿಗೆ ಜಮಾ ಮಾಡಲಾಗಿದೆ ಎಂದರು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾತನಾಡಿ, ತೋಟಗಾರಿಕೆ ಇಲಾಖೆಯಿಂದ ತಾಲೂಕಿನಲ್ಲಿ ಪ್ರಸಕ್ತ ವರ್ಷ ಅತಿ ಹೆಚ್ಚು ಈರುಳ್ಳಿಯನ್ನು ರೈತರು ಬೆಳೆದಿದ್ದಾರೆ. ಇದರ ಜೊತೆಗೆ ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆ ರೈತರಿಗೆ ನೀಡಲಾಗುತ್ತಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ನರೇಗಾ ಯೋಜನೆಯ ಸಹಾಯಧನ ಸೇರಿ ಒಟ್ಟು 622 ಲಕ್ಷ ರೂ. ಗುರಿ ಹೊಂದಿದ್ದು, ಅದರಲ್ಲಿ 361 ಲಕ್ಷ ರೂ ಸಹಾಯಧನವನ್ನು ಫಲಾನುಭವಿಗಳಿಗೆ ನೀಡಲಾಗಿದೆ. ಇದರಲ್ಲಿ ನರೇಗಾ ಯೋಜನೆಯಡಿ ತೋಟಗಾರಿಕೆ ಬೆಳಗಳನ್ನು ರೈತರು ಹೆಚ್ಚಾಗಿ ಬೆಳೆಯುತ್ತಿದ್ದಾರೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಆಡಳಿತಾಧಿಕಾರಿಗಳು, ಅಕಾಲಿಕ ಮಳೆಯಿಂದ ತೋಟಗಾರಿಕೆ ಬೆಳೆಗಳು ಬಹಳಷ್ಟು ಪ್ರಮಾಣದಲ್ಲಿ ಹಾನಿಯಾಗಿವೆ ಎಂಬ ದೂರುಗಳು ರೈತರಿಂದ ಕೇಳಿಬರುತ್ತಿವೆ. ಇದರ ಬಗ್ಗೆ ಸ್ವಂತಃ ತಾವೇ ಹಾನಿಯಾದ ಪ್ರದೇಶಕ್ಕೆ ಹೋಗಿ ಬೆಳೆ ಹಾನಿಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸೂಚಿಸಿದರು.

ಈ ವೇಳೆ ನಿರ್ಮಿತಿ ಕೇಂದ್ರದ ಇಂಜಿನಿಯರ್ ಎಸ್.ಎಸ್. ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿ.ಜಿ. ಹಿರೇಮಠ, ಟಿಎಚ್‌ಒ ಡಾ. ಬಿ.ಎಸ್. ಭಜೇಂತ್ರಿ, ಹಿಂದುಳಿತ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ. ಹನಸಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ ಆಲೂರು, ಪಿಆರ್‌ಇ ಎಇ ಎಸ್.ಡಿ. ಪಾಟೀಲ, ಕೃಷಿ ಇಲಾಖೆ ಅಧಿಕಾರಿ ರವೀಂದ್ರಗೌಡ ಪಾಟೀಲ, ವಲಯ ಅರಣ್ಯ ಅಧಿಕಾರಿ ರಾಮಣ್ಣ ಪೂಜಾರ, ಪಶು ಆಸ್ಪತ್ರೆ ವೈದ್ಯಾಧಿಕಾರಿ ಜಯಶ್ರೀ ಪಾಟೀಲ ಸೇರಿದಂತೆ ಇತರರಿದ್ದರು.

2025-26ನೇ ಸಾಲಿನ ನರೇಗಾ ಯೋಜನೆಯ ಕ್ರಿಯಾ ಯೋಜನೆ ತಯಾರಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸಭೆ ನಡೆಸಲಾಗುತ್ತಿದೆ. ಅದಕ್ಕಾಗಿ ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಆ ದಿನದಂದು ಇರುವ ನೋಡಲ್ ಅಧಿಕಾರಿಗಳು ತಪ್ಪದೇ ಸಭೆಗೆ ಹಾಜರಾಗಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಬೇಡಿಕೆ ಅರ್ಜಿಗಳು ಬಂದಿರುತ್ತಿವೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಪ್ಪದೇ ಗ್ರಾಮ ಸಭೆಗೆ ಹಾಜರಾಗಿ ಕ್ರಿಯಾಯೋಜನೆಯಲ್ಲಿ ಅಳವಡಿಸಲು ಸೂಕ್ತ ಕ್ರಮಗಳನ್ನು ವಹಿಸಬೇಕು.
– ಬಸವರಾಜ ಬಡಿಗೇರ,
ತಾ.ಪಂ ಇಒ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!