HomeGadag Newsಜನಸ್ಪಂದನ ಕಾರ್ಯಕ್ರಮ ಇಂದು

ಜನಸ್ಪಂದನ ಕಾರ್ಯಕ್ರಮ ಇಂದು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಜೂನ್ 26ರ ಮದ್ಯಾಹ್ನ 3ರಿಂದ 5 ಗಂಟೆಯವರೆಗೆ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ತಾಲೂಕು ಮಟ್ಟದ ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಜನಸ್ಪಂದನ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವು ಶಾಸಕ ಡಾ.ಚಂದ್ರು ಲಮಾಣಿ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ. ಗದಗ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಉಪಸ್ಥಿತರಿರಲಿದ್ದಾರೆ. ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಸಲ್ಲಿಸಿ ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ತಹಸೀಲ್ದಾರ ವಾಸುದೇವ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img