ಮಕ್ಕಳನ್ನು ಪಠ್ಯ-ಪುಸ್ತಕಕ್ಕೆ ಸೀಮಿತಗೊಳಿಸದಿರಿ : ಎಚ್.ಎನ್. ನಾಯಕ್

0
Taluk Level Symbolic Program of School Commencement Festival 2024-25
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಮಕ್ಕಳನ್ನು ಪಠ್ಯ-ಪುಸ್ತಕಕ್ಕೆ ಸೀಮಿತಗೊಳಿಸದೇ ಸಂತೋಷ, ಸಂಭ್ರಮ, ಆಸಕ್ತಿಯಿಂದ ಕಲಿಸುವ ಜೊತೆಗೆ ಮಕ್ಕಳಲ್ಲಿ ಮೌಲ್ಯಗಳನ್ನು ಬಿತ್ತುವ ಕೆಲಸವಾಗಬೇಕಿದೆ ಎಂದು ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯಕ್ ಅಭಿಪ್ರಾಯಪಟ್ಟರು.

Advertisement

ಅವರು ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.2 ಸ.ಮಾ.ಪ್ರಾ.ಹೆ.ಮ ಶಾಲೆ ಹಾಗೂ ತಾ.ಪಾ.ಮ.ಬ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಶುಕ್ರವಾರ 2024-25ರ ಶಾಲಾ ಪ್ರಾರಂಭೋತ್ಸವದ ತಾಲೂಕು ಮಟ್ಟದ ಸಾಂಕೇತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೊದಲು ಇದ್ದ ಅವಿಭಕ್ತ ಕುಟಂಬ ವ್ಯವಸ್ಥೆ ಈಗಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಅವಿಭಕ್ತ ಕುಟುಂಬದ ಪರಿಕಲ್ಪನೆಯ ಜೊತೆಗೆ ಇಳಿವಯಸ್ಸಿನಲ್ಲಿರುವ ತಂದೆ-ತಾಯಿಯರನ್ನು ಚೆನ್ನಾಗಿ ನೋಡಿಕೊಳ್ಳುವಂತೆ ನಮ್ಮ ಸಂಸ್ಕೃತಿ ಸಂಪ್ರದಾಯ, ಹಿರಿಯರಿಗೆ ಗೌರವ ನೀಡುವದು ಇತ್ಯಾದಿ ಮಾನವೀಯ ಮೌಲ್ಯಗಳನ್ನು ತಿಳಿಸುವ ಕಾರ್ಯವೂ ಆಗಬೇಕಾಗಿದೆ ಎಂದು ಹೇಳಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಹೂಗುಚ್ಛ ನೀಡಿ ಸ್ವಾಗತಿಸಲಾಯಿತು.

ವೇದಿಕೆಯಲ್ಲಿದ್ದ ಶಿಕ್ಷಕರ ಹಾಗೂ ನೌಕರರ ಸಂಘಟನೆಗಳ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ಉಚಿತ ಪಠ್ಯ-ಪುಸ್ತಕ ಹಾಗೂ ಸಮವಸ್ತçವನ್ನು ವಿತರಿಸಿದರು. ನೂತನವಾಗಿ ಅಧಿಕಾರ ವಹಿಸಿಕೊಂಡ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವೇದಿಕೆಯಿಂದ ಸನ್ಮಾನಿಸಲಾಯಿತು.

Taluk Level Symbolic Program of School Commencement Festival 2024-25

ಶಾಲೆಯ ಮುಖ್ಯೋಪಾಧ್ಯಾಯೆ ಎಸ್.ಎಸ್. ಜಿರಂಕಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಿ.ಎಸ್. ಹರ್ಲಾಪುರ, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಎಂ. ಹವಳದ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ಬಿ. ಹೊಸಮನಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎನ್. ಮುಳಗುಂದ, ಚಂದ್ರು ನೇಕಾರ, ಇ.ಸಿ.ಓ ಉಮೇಶ ಹುಚ್ಚಯ್ಯನಮಠ, ಎಚ್.ಎಮ್. ಗುತ್ತಲ, ಎನ್.ಎನ್. ಸುಣಗಾರ, ಆರ್.ಎಂ. ಶಿರಹಟ್ಟಿ, ಡಿ.ಎನ್. ದೊಡ್ಡಮನಿ, ಪಿ.ಎಚ್. ಕೊಂಡಾಬಿಂಗಿ ಭಾಗವಹಿಸಿದ್ದರು.

ಮುಖ್ಯೋಪಾಧ್ಯಾಯ ಬಿ.ಎಂ. ಕುಂಬಾರ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಬಿ.ಆರ್.ಪಿ ಈಶ್ವರ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಸಿ.ಎಫ್. ಪಾಟೀಲ, ಕೆ.ಆರ್. ಮುದಕಣ್ಣವರ, ಪಿ.ಎಮ್. ಅಡ್ನೂರ ಪ್ರಾರ್ಥಿಸಿದರು. ಉತ್ತರ ವಲಯದ ಸಿ.ಆರ್.ಪಿ ಉಮೇಶ ನೇಕಾರ ನಿರೂಪಿಸಿದರು. ದಕ್ಷಿಣ ವಲಯದ ಸಿ.ಆರ್.ಪಿ ಸತೀಶ ಬೋಮಲೆ ವಂದಿಸಿದರು. ಮೂರು ಶಾಲೆಗಳ ಸಹ ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದರು. ಶಾಲೆಯ ಆರಂಭದ ಮೊದಲ ದಿನವೇ ಬಹಳಷ್ಟು ವಿದ್ಯಾರ್ಥಿಗಳು ಅತ್ಯಂತ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಕಂಡುಬಂದಿತು.

ಶುಕ್ರವಾರ ಬೆಳಿಗ್ಗೆ 9.30ಕ್ಕೆ ದಾಖಲಾತಿ ಆಂದೋಲನದ ಭಾಗವಾಗಿ ಜಾಗೃತಿ ಮೂಡಿಸಲು ಪ್ರಭಾತಪೇರಿಯನ್ನು ಉದ್ಘಾಟಿಸಿದ ಡಿಡಿಪಿಐ ಕಾರ್ಯಾಲಯದ ಎ.ಪಿ.ಸಿ.ಓ ಎಸ್.ಕೆ. ಹವಾಲ್ದಾರ ಮಾತನಾಡಿ, 2024-25ರ ಶೈಕ್ಷಣಿಕ ವರ್ಷದಲ್ಲಿ ಡಿಡಿಪಿಐರವರು ಶೈಕ್ಷಣಿಕ ಬಲವರ್ಧನೆಗಾಗಿ ಐದು ಅಂಶಗಳ ಕಾರ್ಯಕ್ರಮವನ್ನು ಯೋಜಿಸಿದ್ದು, ಅದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದರು. ನೌಕರರ ಸಂಘದ ತಾಲೂಕಾಧ್ಯಕ್ಷ ಡಿ.ಎಚ್. ಪಾಟೀಲ ಮತ್ತಿತರರಿದ್ದರು.


Spread the love

LEAVE A REPLY

Please enter your comment!
Please enter your name here