HomeGadag Newsತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಚಂದ್ರಶೇಖರ್ ಜೆ. ಉದ್ಘಾಟಿಸಿದರು.

ಜ್ಞಾನವಿಕಾಸ ಕೇಂದ್ರದ ಸರ್ವ ಸದಸ್ಯರಿಗೂ ಜ್ಞಾನವಿಕಾಸ ಕಾರ್ಯಕ್ರಮಗಳ ಬಗ್ಗೆ ಮತ್ತು ಯೋಜನೆ ಬಗ್ಗೆ ಮತ್ತು ಗ್ರಾಮ ಅಭಿವೃದ್ಧಿ ಯೋಜನೆಯಲ್ಲಿ ಯೋಜನೆಯಲ್ಲಿ ಸದಸ್ಯರಿಗೆ ಸಿಗುವ ಪ್ರತಿಯೊಂದು ಸೌಲಭ್ಯಗಳು ಕುರಿತು ಎಲ್ಲಾ ಸದಸ್ಯರಿಗೂ ಮಾಹಿತಿ ಮಾರ್ಗದರ್ಶನ ನೀಡಿದರು.

ಜಿಲ್ಲಾ ನಿರ್ದೇಶಕರಾದ ಯೋಗೇಶ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು, ಕೇಂದ್ರದ ಕಾರ್ಯಕ್ರಮಗಳು ಹಾಗೂ ತಂಡಗಳ ಗುಣಮಟ್ಟದ ಬಗ್ಗೆ ಮತ್ತು ಶಿಸ್ತಿನ ಕಾರ್ಯಕ್ರಮಗಳ ಮಾಡಿಕೊಂಡು ಹೋಗುವುದರ ಬಗ್ಗೆ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾದ ಕವಿತಾ ದಂಡಿನ ಮಕ್ಕಳ ಶಿಕ್ಷಣದ ತಂತ್ರಜ್ಞಾನ ಬಳಕೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ವಿಜಯಲಕ್ಷ್ಮೀ ಹೂಗಾರ ನೀರಿನ ಸದ್ಬಳಕೆಯಲ್ಲಿ ನಮ್ಮೆಲ್ಲರ ಪಾತ್ರದ ಬಗ್ಗೆ ಎಲ್ಲಾ ಸದಸ್ಯರಿಗೂ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ನಾಯಕ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಒಕ್ಕೂಟದ ಅಧ್ಯಕ್ಷೆ ಲತಾ ಪತ್ತಾರ, ಜ್ಞಾನವಿಕಾಸ ಸಮನ್ವಯಧಿಕಾರಿ ಗಂಗಮ್ಮ, ಮೇಲ್ವಿಚಾರಕರು, ಜ್ಞಾನವಿಕಾಸ ಸಂಯೋಜಕಿಯರು ಹಾಗೂ ಕೇಂದ್ರದ ಸರ್ವ ಸದಸ್ಯರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!