ಬೆಳಗಾವಿ: ಇಲ್ಲಿನ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್‌ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.
ದಾಳಿಗೆ ಒಳಗಾದವರನ್ನು ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ದೊರೆತ ಕೂಡಲೇ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆದ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಹಳೆಯ ವೈಷಮ್ಯವೇ ಈ ಹಲ್ಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.



