ಮೈಸೂರು ಸ್ಯಾಂಡಲ್ ಸೋಪ್ ಗೆ ತಮನ್ನಾ ರಾಯಭಾರಿ: ಹುಬ್ಬೇರಿಸುವಂತೆ ಮಾಡಿದ ನಟಿಯ ದುಬಾರಿ ಸಂಭಾವನೆ

0
Spread the love

ಕರ್ನಾಟಕದ ಸರ್ಕಾರದ ಒಡೆತನದಲ್ಲಿರುವ ಮೈಸೂರು ಸ್ಯಾಂಡಲ್ ಸೋಪ್​ಗೆ ಹೊಸ ರಾಯಭಾರಿಯಾಗಿ ಬಹುಭಾಷಾ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಲಾಗಿದೆ. ಎರಡು ವರ್ಷ ಎರಡು ದಿನಗಳ ಅವಧಿಗಾಗಿ ತಮನ್ನಾ ಅವರನ್ನು ನೇಮಕ ಮಾಡಲಾಗಿದ್ದು ಇದಕ್ಕಾಗಿ ನಟಿಗೆ ದುಬಾರಿ ಸಂಭಾವನೆಯನ್ನೇ ನೀಡಲಾಗಿದೆ. ತಮನ್ನಾ ಬದಲು ಕನ್ನಡದವರನ್ನೇ ಆಯ್ಕೆ ಮಾಡಿಕೊಳ್ಳಬಹುದಿತ್ತಲ್ಲ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

Advertisement

ತಮನ್ನಾ ಭಾಟಿಯಾ ಅವರು ಬಹುಭಾಷೆಯಲ್ಲಿ ಖ್ಯಾತಿ ಗಳಿಸಿದ್ದಾರೆ. ಈಕೆಯ ಸಿನಿಮಾಗಳು ರೂಪಾಯಿ ಕಲೆಕ್ಷನ್‌ ಮಾಡುತ್ತವೆ. ತಮನ್ನಾ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಾಗಿ ಈಕೆಯನ್ನು ನೇಮಕ ಮಾಡಿಕೊಂಡರೆ ಈ ಬ್ರ್ಯಾಂಡ್ ಉತ್ಪನ್ನಗಳ ಜನಪ್ರಿಯತೆ ಮತ್ತಷ್ಟು ಹೆಚ್ಚಬಹುದು ಎಂಬ ಕಾರಣಕ್ಕೆ ಸರ್ಕಾರ ಈಕೆಯನ್ನು ನೇಮಕ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಅನೇಕ ಬ್ಯೂಟಿ ಬ್ರ್ಯಾಂಡ್​ಗಳು ತಮನ್ನಾ ಭಾಟಿಯಾ ಜೊತೆ ಒಪ್ಪಂದ ಮಾಡಿಕೊಂಡಿವೆ. ಈಗ ಮೈಸೂರು ಸ್ಯಾಂಡಲ್​ಸೋಪ್ ಕೂಡ ಈ ನಟಿಯ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಎರಡು ವರ್ಷಗಳ ಕಾಲ ತಮನ್ನಾ ಜೊತೆ ಕರ್ನಾಟ ಸರ್ಕಾರ ಒಪ್ಪಂದ ಇರಲಿದೆ. ಇದಕ್ಕಾಗಿ ನಟಿಗೆ ಬರೋಬ್ಬರಿ 6.20 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುತ್ತೋಲೆ ವೈರಲ್ ಆಗಿದೆ.


Spread the love

LEAVE A REPLY

Please enter your comment!
Please enter your name here