ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಇಂದು ಮುಂಜಾನೆ ವಾಕ್ ಮಾಡುವಾಗ ತಲೆಸುತ್ತು ಬಂದ ಹಿನ್ನೆಲೆಯಲ್ಲಿ ಅವರನ್ನು ತುರ್ತಾಗಿ ಚೆನ್ನೈ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಕೆಲವೊಂದು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆ ಎಂಬ ಭರವಸೆ ವೈದ್ಯರು ನೀಡಿದ್ದಾರೆ. ಈ ವಿಚಾರ ತಿಳಿದ ತಕ್ಷಣ ಅಭಿಮಾನಿಗಳು ಮತ್ತು ವಿವಿಧ ರಾಜಕೀಯ ನಾಯಕರಿಂದ ಸಿಎಂ ಸ್ಟಾಲಿನ್ ಅವರು ಗುಣಮುಖರಾಗಲೆಂದು ಹಾರೈಸಿದ್ದಾರೆ.



