HomeIndia Newsವಿಧಾನಸಭೆಯಲ್ಲೂ 144 ಮತಗಳಿಂದ ವಿಶ್ವಾಸಮತ ಗೆದ್ದ ತಮಿಳುನಾಡು ಸಿಎಂ ವಿಜಯ್!

ವಿಧಾನಸಭೆಯಲ್ಲೂ 144 ಮತಗಳಿಂದ ವಿಶ್ವಾಸಮತ ಗೆದ್ದ ತಮಿಳುನಾಡು ಸಿಎಂ ವಿಜಯ್!

For Dai;y Updates Join Our whatsapp Group

Spread the love

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ. ಸರ್ಕಾರದ ಪರ 144 ಮಂದಿ ಶಾಸಕರು ಮತ ಚಲಾಯಿಸುವ ಮೂಲಕ ವಿಜಯ್ ಸರ್ಕಾರಕ್ಕೆ ಸ್ಪಷ್ಟ ಬೆಂಬಲ ವ್ಯಕ್ತವಾಗಿದೆ.

ಟಿವಿಕೆ ಜೊತೆಗೆ ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಂ ಲೀಗ್, ವಿಸಿಕೆ ಹಾಗೂ ಎಐಎಡಿಎಂಕೆಯಿಂದ ಬಂಡಾಯವೆದ್ದಿರುವ 27 ಶಾಸಕರು ವಿಜಯ್ ಸರ್ಕಾರದ ಪರವಾಗಿ ನಿಂತಿದ್ದಾರೆ. ವಿಶ್ವಾಸಮತ ಪ್ರಕ್ರಿಯೆ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ನಡೆಸಿದರು. ಇನ್ನು ಒಬ್ಬ ಬಿಜೆಪಿ ಶಾಸಕ ಮತದಾನದಿಂದ ದೂರ ಉಳಿದಿದ್ದಾರೆ.

ಇನ್ನೊಂದೆಡೆ, ಸದನದಲ್ಲಿ ಹಾಜರಿದ್ದ 22 ಎಐಎಡಿಎಂಕೆ ಶಾಸಕರು ಸರ್ಕಾರದ ವಿರುದ್ಧ ಮತ ಚಲಾಯಿಸಿದರು. ಒಟ್ಟು 234 ಸದಸ್ಯರ ಬಲ ಹೊಂದಿರುವ ತಮಿಳುನಾಡು ವಿಧಾನಸಭೆಯಲ್ಲಿ ಸಾಮಾನ್ಯವಾಗಿ ಬಹುಮತಕ್ಕೆ 118 ಶಾಸಕರ ಬೆಂಬಲ ಅಗತ್ಯವಿದೆ.

ಆದರೆ ವಿಜಯ್ ತಿರುಚಿ ಪಶ್ಚಿಮ ಹಾಗೂ ಪೆರಂಬೂರು ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಹಿನ್ನೆಲೆ ಅದನ್ನು ಒಂದೇ ಸ್ಥಾನವಾಗಿ ಪರಿಗಣಿಸಲಾಗಿದೆ.

ಇದೇ ವೇಳೆ ತಿರುಪತ್ತೂರು ಕ್ಷೇತ್ರದ ಟಿವಿಕೆ ಶಾಸಕ ಶ್ರೀನಿವಾಸ್ ಸೇತುಪತಿ ಅವರಿಗೆ ವಿಶ್ವಾಸಮತ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದ್ದರಿಂದ ಸದನದ ಬಲ 232ಕ್ಕೆ ಇಳಿದಿತ್ತು.

ಈ ಹಿನ್ನೆಲೆಯಲ್ಲಿ ಬಹುಮತಕ್ಕೆ 116 ಶಾಸಕರ ಬೆಂಬಲ ಸಾಕಾಗಿತ್ತು. ಆದರೆ ವಿಜಯ್ ಸರ್ಕಾರ 144 ಮತಗಳನ್ನು ಪಡೆಯುವ ಮೂಲಕ ಅಗತ್ಯ ಬಹುಮತಕ್ಕಿಂತ ಹೆಚ್ಚಿನ ಬೆಂಬಲದೊಂದಿಗೆ ವಿಶ್ವಾಸಮತ ಗೆದ್ದಿದೆ.

ಸರ್ಕಾರದ ಪರ ಮತ ಹಂಚಿಕೆ ಹೀಗಿದೆ:

  • ಟಿವಿಕೆ 106,
  • ಕಾಂಗ್ರೆಸ್ 5,
  • ಎಡಪಕ್ಷಗಳು 4,
  • ವಿಸಿಕೆ 2,
  • ಮುಸ್ಲಿಂ ಲೀಗ್ 2,
  • ಎಐಎಡಿಎಂಕೆ ಬಂಡಾಯ ಶಾಸಕರು 27

ಈ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಸರ್ಕಾರ ತನ್ನ ಅಧಿಕಾರವನ್ನು ಅಧಿಕೃತವಾಗಿ ಗಟ್ಟಿಗೊಳಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!