ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರದ ವಿರೋಧ ಇದೆ: ನಂಜಾವಧೂತ ಶ್ರೀ

0
Spread the love

ರಾಮನಗರ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರದ ವಿರೋಧ ಇದೆ ಎಂದು ನಂಜಾವಧೂತ ಶ್ರೀ ಹೇಳಿದ್ದಾರೆ. ಮಾಗಡಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರದ ವಿರೋಧ ಇದೆ. ಈ ನಡುವೆ ದೇವೇಗೌಡರು ಕೇಂದ್ರದ ಜೊತೆ ಮಾತನಾಡಿ ಮನವೊಲಿಕೆ ಮಾಡಿದ್ದಾರೆ.

Advertisement

ಮೇಕೆದಾಟು ನಮ್ಮ ಹಕ್ಕು ಎಂದು ಡಿಸಿಎಂ ಡಿಕೆಶಿ ಪಾದಯಾತ್ರೆ ಮಾಡಿದ್ದಾರೆ. ಆದರೆ ಅದಕ್ಕೂ ಮೊದಲು ಮೇಕೆದಾಟು ಯೋಜನೆ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದರು. ಪಕ್ಷಾತೀತವಾಗಿ ಮೇಕೆದಾಟು ಯೋಜನೆ ಮಾಡಬೇಕು ಅನ್ನೋ ಹಂಬಲವಿದೆ. ಪಕ್ಷಾತೀತವಾಗಿ ಎಲ್ಲರೂ ಮೇಕೆದಾಟು ಯೋಜನೆಗೆ ಬೆಂಬಲಿಸುತ್ತಾರೆ ಎಂದು ಹೇಳಿದರು.

ತಮಿಳುನಾಡಿನಲ್ಲಿ ಯಾವ ರೀತಿ ನೀರಿಗೆ ಜಾತಿ, ಪಕ್ಷ ಇಲ್ಲವೋ ಆ ರೀತಿ ಕರ್ನಾಟಕದಲ್ಲೂ ಬೆಂಬಲ ಸಿಗಬೇಕು. ಎಲ್ಲಾ ಜನ ನಮ್ಮವರೇ, ಇಡೀ ನಾಡು ನಮ್ಮದು ಎನ್ನುವ ರೀತಿ ಒಗ್ಗಟ್ಟಾಗಿ ನಿಲ್ಲಬೇಕು. ಪಕ್ಷಾತೀತವಾಗಿ ಹೋರಾಟ ಆಗಿದ್ದೇ ಆದಲ್ಲಿ ಕೆಲವೇ ವರ್ಷಗಳಲ್ಲಿ ಮೇಕೆದಾಟು ಆಗುತ್ತದೆ. 64 ಟಿಎಂಸಿ ನೀರು ಸದ್ಬಳಕೆ ಮಾಡಕೊಳ್ಳಬಹುದಾಗಿದೆ. ತಮಿಳುನಾಡಿನಲ್ಲೂ ಈ ನೀರನ್ನು ಬಳಸಿಕೊಳ್ಳುತ್ತಿಲ್ಲ. ನಾವು ಕೂಡ ಬಳಸಿಕೊಳ್ಳುತ್ತಿಲ್ಲ. ನೂರಾರು ಟಿಎಂಸಿ ನೀರು ಸಮುದ್ರದ ಪಾಲಾಗುತ್ತಿದೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here