ತಮಿಳುನಾಡು:- ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿರುವ ಘಟನೆ ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಜರುಗಿದೆ.
Advertisement
ಘಟನೆಯಲ್ಲಿ 20 ಜನರು ಗಾಯಗೊಂಡಿದ್ದಾರೆ. ತಿರುಪತ್ತೂರು ಪ್ರದೇಶದ ಪಿಳ್ಳೈಯಾರ್ಪಟ್ಟಿಯಿಂದ ಐದು ಕಿಲೋಮೀಟರ್ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಒಂದು ಬಸ್ ತಿರುಪ್ಪೂರಿನಿಂದ ಕಾರೈಕುಡಿಗೆ ಪ್ರಯಾಣಿಸುತ್ತಿತ್ತು. ಇನ್ನೊಂದು ಬಸ್ ಕಾರೈಕುಡಿಯಿಂದ ದಿಂಡಿಗಲ್ ಜಿಲ್ಲೆಯ ಕಡೆಗೆ ಪ್ರಯಾಣಿಸುತ್ತಿತ್ತು.
ರಕ್ಷಣಾ ತಂಡಗಳು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಿದ್ದು, ಅಪಘಾತದ ಕಾರಣ ಮತ್ತು ಆಸ್ಪತ್ರೆಗೆ ದಾಖಲಾದವರ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


