ಕಲಬುರಗಿ:- ಕಲಬುರಗಿ ತಾಲೂಕಿನ ಅವರಾದ್ ಬಳಿ ಬೈಕ್ ಮತ್ತು ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಬೈಕ್ ಮತ್ತು ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಇಬ್ಬರು ಬೈಕ್ ಸವಾರರು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಭೀಕರ ರಸ್ತೆ ಅಪಘಾತದಿಂದ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸದ್ಯ ಘಟನಾ ಸ್ಥಳದಲ್ಲಿ ಕಲಬುರಗಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


