ಚಿಕ್ಕಬಳ್ಳಾಪುರ:- ನಿಂತಿದ್ದ ಕ್ಯಾಂಟರ್ಗೆ ಟ್ಯಾಂಕರ್ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಜರುಗಿದೆ.
Advertisement
ಈ ಭೀಕರ ಅಪಘಾತದಲ್ಲಿ ಪವಾಡ ಸದೃಶ ರೀತಿ ಕ್ಯಾಂಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಟ್ಯಾಂಕರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತ ಹಿನ್ನಲೆ ಸ್ಥಳದಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.