ಸ್ಯಾಂಡಲ್‌ವುಡ್‌ನ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ಸೋನಲ್ ಮಂಥೆರೋ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Advertisement
ಗುರು-ಹಿರಿಯರ ಸಮ್ಮುಖದಲ್ಲಿ ಬೆಂಗಳೂರಿನಪೂರ್ಣಿಮಾ ಪಾಲೇಸ್‌ನಲ್ಲಿಯೇ ಬೆಳಗ್ಗೆ 10.50ಕ್ಕೆ ನಡೆಯಿತು. ಚಿತ್ರರಂಗದ ಅನೇಕ ಗಣ್ಯರು ಮತ್ತು ಕುಟುಂಬದ ಸಮ್ಮುಖದಲ್ಲಿ ಈ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿತು. ತಾಳಿ ಕಟ್ಟೋ ವೇಳೆ ನಟಿ ಸೋನಲ್ ಭಾವುಕರಾಗಿದ್ದರು.
ನಿನ್ನೆ ಸ್ಟಾರ್ ಜೋಡಿದ ಆರತಕ್ಷತೆ ಸಮಾರಂಭಕ್ಕೆ ಸಿನಿಮಾ ತಾರೆಯರು, ರಾಜಕೀಯ ಗಣ್ಯರು ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದರು.
ಇಂದು ಕೂಡ ಹಲವಾರು ಸೆಲೆಬ್ರಿಟಿಗಳು ತರುಣ್ ಸುಧೀರ್ ಹಾಗೂ ಸೋನಲ್ ಮದುವೆಯಲ್ಲಿ ಭಾಗಿಯಾಗಿದ್ದಾರೆ. ನಟ ಶರಣ್ ದಂಪತಿ, ನಟಿ ಶೃತಿ ಕುಟುಂಬಸ್ಥರು, ನೆನಪಿರಲಿ ಪ್ರೇಮ್ ದಂಪತಿ ಸೇರಿದಂತೆ ಇನ್ನೂ ಹಲವಾರು ಸ್ಟಾರ್ ನಟ ನಟಿಯರು ಬಂದಿದ್ದಾರೆ.
ಸದ್ಯ ಸ್ಟಾರ್ ಜೋಡಿಯ ಮದುವೆಯ ಫೋಟೋಗಳು ಸಾಮಾಜಿಕಲ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.